nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾವೇರಿ ಹೋರಾಟ:  ರಾಜ್ಯಾದ್ಯಾಂತ ನಡೆದ ಕರ್ನಾಟಕ ಬಂದ್ ಕೊರಟಗೆರೆಯಲ್ಲಿ ಯಶಸ್ವಿ
    ರಾಜ್ಯ ಸುದ್ದಿ September 30, 2023

    ಕಾವೇರಿ ಹೋರಾಟ:  ರಾಜ್ಯಾದ್ಯಾಂತ ನಡೆದ ಕರ್ನಾಟಕ ಬಂದ್ ಕೊರಟಗೆರೆಯಲ್ಲಿ ಯಶಸ್ವಿ

    By adminSeptember 30, 2023No Comments2 Mins Read
    koratagere

    ಕೊರಟಗೆರೆ:ಕಾವೇರಿ ನೀರು ಕನ್ನಡಿಗರ ಸ್ವತ್ತು, ಆದರೆ ರಾಜ್ಯ ಸರ್ಕಾರ ತನ್ನ ರಾಜಕೀಯಕ್ಕೋಸ್ಕರಾ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುತ್ತಿದೆ ಎಂದು ಖಂಡಿಸಿ ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯವರಿಗೆ ಬಾರಿ ಕಾಲ್ನಡಿಗೆಯ ಮುಖಾಂತರ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ತಹಶೀಲ್ದಾರ್ ಮುಖಾಂತರ ಮನವಿ ಪತ್ರ ಸಲ್ಲಿಸಿದರು.

    ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ತೀವ್ರವಾಗಿ ನಡೆಯುತ್ತಿದ್ದು, ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ಬಂದ್‍ನ್ನು ಮಾಡಿದರು, ನಂತರ ಸೆ.29 ರಂದು ಇಡೀ ರಾಜ್ಯವನ್ನೇ ಬಂದ್ ಮಾಡುವಂತೆ ರಾಜ್ಯ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು ಅದರಂತೆ ಜಿಲ್ಲಾದ್ಯಂತ ಬಂದ್‍ಗಳು ನಡೆಯಿತು, ಕೊರಟಗೆರೆಯಲ್ಲೂ ಸಹ ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‍ಶೆಟ್ಟಿ ಬಣ), ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆ, ದರ್ಶನ್ ಅಭಿಮಾನಿ ಬಳಗದವರಿಂದ ನಡೆದ ಶುಕ್ರವಾರದ ಕರ್ನಾಟಕ ಬಂದ್‍ನ ವೇಳೆ ಬೈಕ್ ರ್ಯಾಲಿ ನಡೆಸಿದರು, ಈ ಬಂದ್‍ಗೆ ಅಂಗಡಿ ಮಾಲಿಕರು, ವರ್ತಕರು, ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.


    Provided by
    Provided by

    ಕರ್ನಾಟಕ ರಣಧೀರರ ವೇದಿಕೆ ತಾ.ಅಧ್ಯಕ್ಷ ಮಂಜುಸ್ವಾಮಿ ಎಂ.ಎನ್ ಮಾತನಾಡಿ, ಕಾವೇರಿ ನದಿ ನೀರಿನ ವಿಚಾರವಾಗಿ ಶತ ಶತಮಾನಗಳಿಂದಲೂ ಹೋರಾಟ ನಡೆಯುತ್ತಲೇ ಇದೆ, ಕನ್ನಡ ನಾಡಿನ ತಲಕಾವೇರಿಯಲ್ಲಿ ಉಗಮಿಸಿ ಒಟ್ಟು 13 ಜಿಲ್ಲೆಗೆ ಪ್ರತ್ಯೇಕ್ಷವಾಗಿ ಪರೋಕ್ಷವಾಗಿ ರೈತರ ಹಾಗೂ ಸಾರ್ವಜನಿಕರ ಜೀವನಾಡಿಯಾಗಿರುವ ಕಾವೇರಿಯು ತಮಿಳು ನಾಡಿನ ಸರ್ಕಾರ ತಮಿಳು ನಾಡಿಗೆ ಅತಿ ಹೆಚ್ಚು ನೀರು ಬಿಡುವಂತೆ ಒತ್ತಡ ಮಾಡಿ ಕಾವೇರಿ ನೀರು ನಿರ್ವಾಹಣಾ ಸಮಿತಿಯಿಂದ ನಮ್ಮ ನಾಡಿಗೆ ಅನ್ಯಾಯವಾಗುವಂತೆ ಆದೇಶ ಹೊರಡಿಸಿಕೊಂಡು ನಾಡಿನ ರೈತಾಪಿ ವರ್ಗಕ್ಕೆ ಪ್ರತಿಬಾರಿಯೂ ಅನ್ಯಾಯವನ್ನೇ ಮಾಡಿಕೊಂಡು ಬರುತ್ತಿದೆ ಎಂದು ಹೇಳಿದರು.

    ಆದ್ದರಿಂದ ಒಕ್ಕೂಟ ಭಾರತ ಸರ್ಕಾರದ ಅಧಿಕಾರಿಗಳು ಜಂಟಿ ನಿಯೋಗವನ್ನು ರಚಿಸಿ ತಮಿಳುನಾಡು ಹಾಗೂ ಕರ್ನಾಟಕದ ಕಾವೇರಿ ನದಿಯ ಪ್ರಾಂತ್ಯದ ಜಮೀನು ಬೆಳೆ, ಕುಡಿಯಲು ಬಳಸುವ ನೀರಿನ ಪ್ರಮಾಣ ಕಾವೇರಿಯ ಕೃಷ್ಣರಾಜಸಾಗರ ಜಲಶಾಯದಲ್ಲಿ ಕಾವೇರಿ ನೀರಿನ ಶೇಖರಣಾ ಮಟ್ಟ ಹಾಗೂ ಒಳ ಹರಿವು-ಹೊರ ಹರಿವಿನ ವರದಿಯನ್ನು ಅವಲೋಕಿಸಿ ಕನ್ನಡ ನಾಡಿಗೆ ಕಾವೇರಿ ನೀರಿನ ಅಂಚಿಕೆಯಲ್ಲಿ ಅನ್ಯಾಯವಾಗುತ್ತಿರುವುದನ್ನು ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಿ ಸೂಕ್ತವಾದ ನ್ಯಾಯವನ್ನು ಕನ್ನಡ ನಾಡಿಗೆ ಒದಗಿಸಿಕೊಡಬೇಕೆಂದು ಅಗ್ರಹಿಸಿದರು.

    ಕರ್ನಾಟಕ ರಾಜ್ಯ ರೈತ ಸಂಘದ ತಾ.ಅಧ್ಯಕ್ಷ ಸಿದ್ದರಾಜು ಮಾತನಾಡಿ, ನಾಡಿನ ಅತಿಹೆಚ್ಚು ಜನಸಂಖೈಯುಳ್ಳ ಬೆಂಗಳೂರಿನಲ್ಲಿಯೇ ಕುಡಿಯಲು ನೀರಿಲ್ಲ, ಮುಂದಿನ ಲೋಕಸಭಾ ಚುನಾವಣಾ ಗಿಮಿಕ್‍ನಿಂದ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಡುತ್ತಿದೆ, ಇದು ಜಲ ಸಂಪನ್ಮೂಲ ಸಚಿವರಿಗೆ ನಾಚಿಕೆಗೇಡಿನ ಸಂಗತಿ, ನ್ಯಾಯಲಯದ ಮತ್ತು ಪ್ರಾಧಿಕಾರದ ಆದೇಶವನ್ನು ಪಾಲಿಸಿ ಕನ್ನಡಿಗರಿಗೆ ಮಣ್ಣು ತಿನ್ನಿಸಲು ರಾಜ್ಯ ಸರ್ಕಾರ ಹೊರಟಿದೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಕಲಿಸಿದಂತೆ ಕಾಂಗ್ರೆಸ್ ಸರ್ಕಾರಕ್ಕೂ ತಕ್ಕಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.