ಸುಮಾರು 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಬತ್ತಿ ಹೋಗಿದ್ದ ಕಾವೇರಿ, ಇದೀಗ ಮತ್ತೆ ಮೈ ತುಂಬಿ ಹರಿಯುತ್ತಿದೆ. ತೀವ್ರ ಬರದಿಂದಾಗಿ ಹರಿಯುವಿಕೆಯನ್ನೇ ನಿಲ್ಲಿಸಿದ್ದ ಜೀವನದಿಯಾಗಿದ್ದ ಕಾವೇರಿಗೆ ಮತ್ತೆ ಜೀವಕಳೆ ಬಂದಿದೆ.
ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ಮಾತ್ರವಲ್ಲ, ಕೊಡಗಿನ ಹೆಚ್ಚಿನ ಎಲ್ಲಾ ನದಿ ತೊರೆಗಳು ತುಂಬಿ ಹರಿಯುತ್ತಿವೆ. ಕೊಡಗು ಮತ್ತೆ ಜಲರಾಶಿಯಿಂದ ಜನರನ್ನು ಆಕರ್ಷಿಸುತ್ತಿದೆ. ವಿಶೇಷವಾಗಿ ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳು ಕುಡಿಯುವ ನೀರಿಗಾಗಿ ಆಹಾಕಾರ ಉಂಟಾಗಿತ್ತು. ಆದರೆ ಇದೀಗ ಕಾವೇರಿಯಲ್ಲಿ ನೀರು ಹರಿಯುತ್ತಿರುವುದು ಸದ್ಯ ನೀರಿನ ಬವಣೆ ದೂರವಾಗುವಂತೆ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


