ಕೊರಟಗೆರೆ: ಬೂದಗವಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಬಿ.ಎನ್. ಕವಿತಾ ರಮೇಶ್ ಅವಿರೋಧ ಆಯ್ಕೆಯಾಗಿದ್ದಾರೆ.
ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿಯ 3ನೇ ಅವಧಿಯ ಅಧ್ಯಕ್ಷೆಯಾಗಿ ಆಯ್ಕೆಯಾದ ಬಿ.ಎನ್. ಕವಿತಾರಮೇಶ್ ಆಯ್ಕೆಯಾದರು.
ಮಲ್ಲೇಕಾವು ಗ್ರಾಮ ಪಂಚಾಯಿತಿ ಕ್ಷೇತ್ರದಿಂದ ಚುನಾಯಿತರಾಗಿದ್ದ ಬಿ.ಎನ್.ಕವಿತಾರಮೇಶ್, ಬೂದಗವಿ ಗ್ರಾಮ ಪಂಚಾಯಿತಿಯ 19 ಜನ ಸದಸ್ಯರು ಪೈಕಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು.
ಸಿದ್ದರಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಚಂದ್ರಶೇಖರ್ ಮುಂದುವರಿಕೆಯಾಗಿದ್ದಾರೆ.
ನೂತನ ಅಧ್ಯಕ್ಷೆ ಕವಿತಾ ರಮೇಶ್ ಮಾತನಾಡಿ, ಗ್ರಾಮಗಳ ಸಮಗ್ರ ಅಭಿವೃದ್ದಿಗೆ ಶ್ರಮಿಸುವ ಭರವಸೆ ನೀಡಿದರು. ಕೊರಟಗೆರೆ ತಹಶೀಲ್ದಾರ್ ಮಂಜುನಾಥ ಕೆ. ನೇತೃತ್ವದಲ್ಲಿ ಚುನಾವಣೆ ನಡೆಯಿತು.
ಪಿಎಸ್ ಐ ಚೇತನ್ ಕುಮಾರ್, ಸ್ಥಳೀಯ ಜನ ಪ್ರತಿನಿಧಿಗಳು ಯುವ ಮುಖಂಡರು ಸಾರ್ವಜನಿಕರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296