ಪಾವಗಡ: ಸಿದ್ದರಾಮಯ್ಯ ಸರ್ಕಾರ ಎಪಿಎಂಸಿ ಕೃಷಿ ಕಾಯ್ದೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಪೂಜಾರಪ್ಪ ಹಾಗೂ ಪದಾಧಿಕಾರಿಗಳು ಸಿಹಿ ಹಂಚಿ ಸಂಭ್ರಮಿಸಿದರು.
ಪಟ್ಟಣದ ಆರ್ ಎಂಸಿ ಮಾರುಕಟ್ಟೆಯಲ್ಲಿ ಸೋಮವಾರ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ ಹಿಂಪಡೆದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ನಂತರ ರೈತರನ್ನು ಉದ್ದೇಶಿಸಿ ಮಾತನಾಡಿದ ಪೂಜಾರಪ್ಪ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದನ್ನು ವಿರೋಧಿಸಿ ದೇಶಾದ್ಯಂತ ರೈತರು ಉಗ್ರ ಹೋರಾಟ ಮಾಡಿದಾಗ, ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಮಣಿದು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದ್ದರು. ಆದರೆ ರಾಜ್ಯ ಸರ್ಕಾರ ಮಾತ್ರ ಈ ಕಾಯ್ದೆ ವಾಪಸ್ ಪಡೆದಿರಲಿಲ್ಲ. ಇದರ ವಿರುದ್ಧ ನಮ್ಮ ರಾಜ್ಯದ ರೈತರು ನಿರಂತರವಾಗಿ ಹೋರಾಟ ನಡೆಸಿದ ಫಲವಾಗಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಈ ಕಾಯ್ದೆಯನ್ನು ಹಿಂಪಡೆದಿರುವುದು ಸಂತಸ ತಂದಿದೆ ಎಂದರು.
ಈ ಸಂದರ್ಭದಲ್ಲಿ ವೀರಭದ್ರಪ್ಪ, ಮಂಜುನಾಥ್, ರಾಮಾಂಜನೇಯ, ಕದ್ರೆಹಳ್ಳಿ ಮಂಜುನಾಥ್, ಮಾರಣ್ಣ, ಚಿತ್ತಯ್ಯ, ಗೋಪಾಲಪ್ಪ, ರಾಮಚಂದ್ರಪ್ಪ ಹಾಗೂ ಇನ್ನೂ ಕೆಲವರು ಉಪಸ್ಥಿತರಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA