ಹೆಚ್.ಡಿ.ಕೋಟೆ/ಸರಗೂರು: ಸಾರ್ವಜನಿಕರಿಂದ ಲಂಚ ಸ್ವೀಕರಿಸುವ ಅಧಿಕಾರಿಗಳನ್ನು ಶಾಸಕ ಅನಿಲ್ ಚಿಕ್ಕಮಾದು ತರಾಟೆಗೆತ್ತಿಕೊಂಡಿದ್ದು, ಎಚ್ಚರಿಕೆಯನ್ನು ನೀಡಿದರು.
ಹೆಚ್.ಡಿ.ಕೋಟೆ ತಾಲ್ಲೂಕಿನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಸಲಾದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ನ್ಯಾಯುತವಾಗಿ ಮಾನವೀಯತೆಯ ಗುಣದಿಂದ ಸಾರ್ವಜನಿಕರಿಗೆ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೋಟೆ ಮತ್ತು ಸರಗೂರು ತಹಶೀಲ್ದಾರ್ ಎಸ್ .ನರಗುಂದ, ಚಲುವರಾಜು, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಧಿಕಾರಿ ರಾಜೇಶ್, ಪುರಸಭೆ ಅಧ್ಯಕ್ಷೆ ನಾಗಮ್ಮ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್. ಸಿ.ನರಸಿಂಹಮೂರ್ತಿ ವಿವಿಧ ಅಧಿಕಾರಿಗಳು ಭಾಗಿಯಾಗಿದ್ದರು .
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB