ರುದ್ರಪ್ರಯಾಗ: ಕೇದಾರನಾಥದಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶದ ದುರ್ಗಾಭಾಯಿ ಖಾಪರ್ (50,) ಸಮನ್ ಭಾಯ್ (50), ಗುಜರಾತ್‌ನ ಭರತ್ ಭಾಯಿ ನಿರಾಲಾಲ್ (52) ಮತ್ತು ನೇಪಾಳದ ತಿತ್ಲಿ ದೇವಿ (70) ಮೃತಪಟ್ಟವರು ಎಂದು ತಿಳಿದು ಬಂದಿದೆ.
ನಾಲ್ವರು ಯಾತ್ರಾರ್ಥಿಗಳು ಮೃತದೇಹಗಳನ್ನು ಅವಶೇಷಗಳಡಿಯಿಂದ ಮಂಗಳವಾರ ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅವಶೇಷಗಳಡಿಯಲ್ಲಿ ಇನ್ನಷ್ಟು ಯಾತ್ರಾರ್ಥಿಗಳು ಸಿಲುಕಿರುವ ಸಾಧ್ಯತೆಯಿದೆ ಎಂದು ರುದ್ರಪ್ರಯಾಗ ಪೊಲೀಸರು ತಿಳಿಸಿದ್ದಾರೆ.
ಕೇದಾರನಾಥಕ್ಕೆ ಭೇಟಿ ನೀಡಿದ್ದ ಯಾತ್ರಾರ್ಥಿಗಳ ತಂಡವೊಂದು ಸೋಮವಾರ ರಾತ್ರಿ 7:20ರ ಸುಮಾರಿಗೆ ಹಿಂದಿರುಗುತ್ತಿದ್ದ ವೇಳೆ ಭೂಕುಸಿತಕ್ಕೆ ಸಿಲುಕಿಕೊಂಡಿದ್ದರು.
ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು. ಮಧ್ಯಪ್ರದೇಶದ ಗೋಪಾಲ್ (50) ಎಂಬವರ ಮೃತದೇಹ ಹೊರತೆಗೆಯಲಾಗಿತ್ತು. ಮೂವರನ್ನು ರಕ್ಷಣೆ ಮಾಡಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q