ತುಮಕೂರು: ತೋಟದ ಕೆಲಸಕ್ಕೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಚೌಡೇನಹಳ್ಳಿಯಲ್ಲಿ ನಡೆದಿದೆ.
ಕರಿಯಣ್ಣ (50) ಕರಡಿ ದಾಳಿಗೆ ಒಳಗಾದ ರೈತನಾಗಿದ್ದು, ಇಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ತೋಟದ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಹಲಸಿನ ಮರದಲ್ಲಿದ್ದ ಕರಡಿ ರೈತನ ಮೇಲೆ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ.
ಕರಡಿ ದಾಳಿಯಿಂದ ಗಂಭೀರ ಗಾಯಗೊಂಡ ಕರಿಯಣ್ಣ ತಪ್ಪಿಸಿಕೊಂಡು ರಕ್ತದ ಮಡುವಿನಲ್ಲೇ ರಸ್ತೆ ಬದಿ ಕುಳಿತಿದ್ದರು. ಕೂಡಲೇ ಸ್ಥಳೀಯರು ರೈತನ ಸಹಾಯಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ.
ಸತತ 1 ಗಂಟೆಯಿಂದ ಆಂಬುಲೆನ್ಸ್ ಗೆ ಕರೆ ಮಾಡಿದರೂ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಪಂದಿದ ಕಾರಣ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ತೀವ್ರ ಸಮಸ್ಯೆ ಉಂಟಾಗಿದ್ದು, ತುರ್ತು ಸೇವೆಗೆ ಸಿಗಬೇಕಾದ ಆಂಬುಲೆನ್ಸ್ ಊಟಕಿಲ್ಲದ ಉಪ್ಪಿನಕಾಯಿಯಂತಾಗಿದೆ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz