ಸರಗೂರು: ತಾಲ್ಲೂಕಿನ ಇತ್ತೀಚಿನ ದಿನಗಳಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಮಾಡಿದ್ದು. ಆದರೆ ಕಳಪೆ ಕಾಮಗಾಯಿಂದಾಗಿ ರಸ್ತೆಗೆ ಹಾಕಿದ ಡಾಂಬಾರು ಕಿತ್ತು ಹೋಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರಗೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಗನಹಳ್ಳಿ ಮಾರ್ಗವಾಗಿ ಆಡಹಳ್ಳಿ ಗ್ರಾಮಕ್ಕೆ ಹಾದುಹೋಗುವ ರಸ್ತೆ ಇದಾಗಿದ್ದು, ಕೆಲವು ತಿಂಗಳ ಹಿಂದೆ ರಸ್ತೆ ಕಾಮಗಾರಿ ಮಾಡಿದ್ದಾರೆ. ಆದರೆ ಇದೀಗ ಡಾಂಬರ್ ಕಿತ್ತುಹೋಗಿ ನೀರು ನಿಂತಿದ್ದು, ಪ್ರಯಾಣಿಕರ ಪ್ರಾಣಕ್ಕೆ ಕುತ್ತು ತರುವ ಸ್ಥಿತಿಯಲ್ಲಿದೆ.
ಸರಗೂರು ಮತ್ತು ಹೆಚ್.ಡಿ.ಕೋಟೆ ತಾಲ್ಲೂಕಿಗೆ ಹೋಗುವ ಇದ್ದಾಗಿದ್ದು, ರೈತರು ಹಾಗೂ ಶಾಲೆ ಕಾಲೇಜು ಮಕ್ಕಳು ಆಡಹಳ್ಳಿ ಗ್ರಾಮಸ್ಥರು ಇದೆ ಮಾರ್ಗವಾಗಿ ತೆರಳುತ್ತಿದ್ದಾರೆ. ಕಳಪೆ ಕಾಮಗಾರಿಯಿಂದಾಗಿ ಇದೀಗ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜಿಲ್ಲಾ ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ ಹಾಗೂ ಗುತ್ತಿಗೆದಾರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ರಸ್ತೆಯನ್ನು ಮರು ಕಾಮಗಾರಿ ನಡೆಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದರೆ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz