ಬಿಬಿಎಂಪಿಯ ಮುಖ್ಯ ಇಂಜಿನಿಯರಿಂಗ್ ಚೀಫ್ ಸರ್ಕಾರದ ದೊಡ್ಡ ವ್ಯಕ್ತಿಗಳ ಹೆಸರು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಖಾಸಗಿಯಾಗಿ ಭೇಟಿಯಾಗಲು ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇಂಜಿನಿಯರಿಂಗ್ ಛಿಫ್ ಪ್ರಹ್ಲಾದ್ ಇರುವವರೆಗೂ ಬಿಬಿಎಂಪಿ ಉದ್ಧಾರ ಆಗಲ್ಲ. ಹಿರಿತನದ ಆಧಾರದ ಮೇಲೆ ಹಣ ಕೊಡುವಂತೆ ಮನವಿ ಮಾಡಿಕೊಂಡಿದ್ದೇನೆ. ಸ್ವಲ್ಪ ಹಣ ಬಿಡುಗಡೆ ಮಾಡಿದ್ದಾರೆ. ಇದರಿಂದ ನಮಗೆ ತೃಪ್ತಿ ಇದೆ ಎಂದು ಹೇಳುವುದಿಲ್ಲ, ಗುತ್ತಿಗೆದಾರರ ಹಣವನ್ನು ಪೂರ್ಣ ಪ್ರಮಾಣದಲ್ಲಿ ಕ್ಲಿಯರ್ ಮಾಡುವಂತೆ ಮನವಿ ಮಾಡಿದ್ದೇನೆ. ಡಿಸೆಂಬರ್ ಒಳಗಡೆ ಪ್ರಯತ್ನ ಮಾಡುತ್ತೇವೆಂದು ಹೇಳಿದ್ದಾರೆ. ಡಿಕೆ.ಶಿವಕುಮಾರ್ ಅವರನ್ನು ಖಾಸಗಿ ವಿಚಾರವಾಗಿ ಭೇಟಿ ಮಾಡಿದ್ದೇನೆ ಅಷ್ಟೇ” ಎಂದು ತಿಳಿಸಿದರು.
ಇದೇ ವೇಳೆ ಬಿಬಿಎಂಪಿ ಚೀಫ್ ಇಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಮೇಲೆ ಕೆಂಪಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಪ್ರಹ್ಲಾದ್ ಇರುವವರೆಗೂ ಬಿಬಿಎಂಪಿ ಉದ್ಧಾರ ಆಗಲ್ಲ ಎಂದು ಹೇಳಿದರು.


