ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಾಡುಕಂಡ ಶ್ರೇಷ್ಠ ದೂರ ದೃಷ್ಟಿಯ ಆಡಳಿತಗಾರ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದ ಬಳಿ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡರು ಅಲ್ಲಿಂದ ಕಾಲ್ನಡಿಗೆಯಲ್ಲಿ ಹಾಗೂ ಬೈಕ್ ರ್ಯಾಲಿ ಮೂಲಕ ಹಿರಣ್ಣಯ್ಯ ಬಯಲುರಂಗ ಮಂದಿರದ ವೇದಿಕೆ ಕಾರ್ಯಕ್ರಮಕ್ಕೆ ಸಾಗಿದರು.
ರ್ಯಾಲಿಯ ಉದ್ದಕ್ಕೂ ಕೆಂಪೇಗೌಡರಿಗೆ ಘೋಷಣೆಗಳನ್ನು ಕೂಗುತ್ತ ಸಾಗಿದರು ರ್ಯಾಲಿಯಲ್ಲಿ ವಿವಿಧ ಜಾನಪದ ತಂಡಗಳು ಜನರನ್ನು ಮನರಂಜಿಸಿದವು . ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲ ಜಯರಾಮ್ ರವರ ಏಕಲವ್ಯ ಹೆಸರಿನ ಹೋರಿ ಜನರ ಆಕರ್ಷಣೆಯಾಗಿದ್ದುವು. ದಾರಿಯುದ್ದಕ್ಕೂ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು
ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಮಸಾಲ ಜಯರಾಮ್ . ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ , ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೆಲ್ ಕಾಂತರಾಜು ಸುಬ್ರಮಣ್ಯ ಶ್ರೀಕಠೇಗೌಡ ,ಬಾಣಸಂದ್ರ ರಮೇಶ್ , ದೊಡ್ಡಾಘಟ್ಟ ಚಂದ್ರೇಶ್ ,ಕೊಂಡಜ್ಜಿ ವಿಶ್ವನಾಥ್ ಮತ್ತಿತರರು ಹಾಜರಿದ್ದರು
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz