nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು

    August 30, 2026

    ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್

    August 30, 2026

    ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ

    August 30, 2026
    Facebook Twitter Instagram
    ಟ್ರೆಂಡಿಂಗ್
    • ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು
    • ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್
    • ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ
    • KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ
    • ಬೀದರ್‌ ಜಿಲ್ಲಾ ಪಂಚಾಯತ್‌ ಸಿಇಒ ಬದಲಾವಣೆ: ನೂತನ ಸಿಇಒ ಆಗಿ ಗಿತ್ತೆ ಮಾಧವ್ ನೇಮಕ
    • ನಗರನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಸೌಲಭ್ಯಗಳ ಸದ್ಬಳಕೆಗೆ ಕರೆ
    • SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ
    • Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    ತುರುವೇಕೆರೆ June 26, 2026

    ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

    By adminJune 26, 2026No Comments2 Mins Read
    turuvekere.jpg

    ತುರುವೇಕೆರೆ: ತಾಲ್ಲೂಕು ಆಡಳಿತ, ತಾಲ್ಲೂಕು ಒಕ್ಕಲಿಗರ ಸಂಘ, ಒಕ್ಕಲಿಗ ನೌಕರರ ಸಂಘ, ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘ, ಕೆಂಪೇಗೌಡ ಯುವ ಸೇನೆ ಮತ್ತು ನೇಗಿಲ ಯೋಗಿ ಸೇವಾ ಸಮಾಜದ ವತಿಯಿಂದ ನಾಡಪ್ರಭು ಕೆಂಪೇಗೌಡರ 517ನೇ ಜಯಂತ್ಯುತ್ಸವವನ್ನು ಜೂನ್ 27ರಂದು ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಬಡಗರಹಳ್ಳಿ ತ್ಯಾಗರಾಜು ತಿಳಿಸಿದರು.

    ಅವರು ಪಟ್ಟಣದ ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.27ರ ಶನಿವಾರ ಬೆಳಗ್ಗೆ 10 ಘಂಟೆಗೆ ತಾಲ್ಲೂಕು ಕಚೇರಿ ಬಳಿ ದೇವೇಗೌಡರ ಪ್ರತಿಮೆ ಮುಂಭಾಗದಿಂದ ಕೆಂಪೇಗೌಡರ ಭಾವಚಿತ್ರವನ್ನು ವಿವಿಧ ಜಾನಪದ ಕಲಾತಂಡಗಳೊಂದಿಗೆ, ಸೋಮನ ಕುಣಿತ, ರಂಗ ಕುಣಿತ, ಕೋಲಾಟ, ಸಿಡಿಮದ್ದಿನ ಚಮತ್ಕಾರ ಮತ್ತು ನಗಾರಿ ಸಮೇತ ಮೆರವಣಿಗೆ ನಡೆಸಲಾಗುವುದು. ಅಲ್ಲದೆ 9:30 ಘಂಟೆಗೆ ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಯಲಿದೆ.

    ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಕೃಪಾಸಿರ್ವಾದದೊಂದಿಗೆ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪಟ್ಟನಾಯಕನಹಳ್ಳಿ ಶ್ರೀ ನಂಜಾವಧೂತ ಸ್ವಾಮೀಜಿ ಹಾಗೂ ಬೆಟ್ಟಗೊಂಡನಹಳ್ಳಿ ಮಠದ ಶ್ರೀ ಬಾಲಕೃಷ್ಣಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

    ಶಾಸಕ ಎಂ.ಟಿ.ಕೃಷ್ಣಪ್ಪನವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಶೇಷ ಅತಿಥಿಗಳಾಗಿ 20 ಲಕ್ಷ ಪುಸ್ತಕಗಳ ಸಂಗ್ರಹಣೆ ಮೂಲಕ ವಿಶ್ವ ದಾಖಲೆ ಮಾಡಿರುವ ಪದ್ಮಶ್ರೀ ಪುರಸ್ಕೃತರಾದ ಪಾಂಡವಪುರ ಅಂಕೇಗೌಡ್ರು, ಮುಖ್ಯ ಭಾಷಣಕಾರರಾಗಿ ಉಪನ್ಯಾಸಕ ಎಸ್.ಎಲ್.ವಿಜಯ್ ಕುಮಾರ್ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಲಶಕ್ತಿ ಮತ್ತು ರೈಲ್ವೆ ಸಚಿವರಾದ ವಿ.ಸೋಮಣ್ಣ, ರಾಜ್ಯಸಭಾ ಸದಸ್ಯ ಹಾಗೂ ಚಲನಚಿತ್ರ ನಟ ಜಗ್ಗೇಶ್, ಎಂ.ಎಲ್.ಸಿ ಚಿದಾನಂದ ಗೌಡ, ಆರ್.ರಾಜೇಂದ್ರ, ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ.

    ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ನಾಡಪ್ರಭು ಶ್ರೀ ಕೆಂಪೇಗೌಡ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.97 ಅಂಕ ಪಡೆದ ಒಕ್ಕಲಿಗ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದು, ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು, ವಿದ್ವಾಂಸರು, ಅಧಿಕಾರಿಗಳು, ಕಲಾಶಕ್ತರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಾಲ್ಲೂಕು ಅಧ್ಯಕ್ಷ ತ್ಯಾಗರಾಜು ಈ ಮೂಲಕ ಮನವಿ ಮಾಡಿದ್ದಾರೆ.

    ಸುದ್ದಿ ಗೋಷ್ಠಿಯಲ್ಲಿ ಜನಪ್ರತಿನಿಧಿಗಳು ಹಾಗೂ ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಎ.ಬಿ.ಜಗದೀಶ್, ಡಾ.ನವೀನ್, ಡಾ.ಚೊದ್ರಿ ನಾಗೇಶ್, ಜಿ.ಪ್ರಸನ್ನಕುಮಾರ್, ಬಸವರಾಜು, ಪಾಪಣ್ಣ, ಪ್ರಹ್ಲಾದ್, ವಿಜಯ್ ಕುಮಾರ್, ಶಂಕರಪ್ಪ ಸೇರಿದಂತೆ ಸಮಾಜ ಬಾಂಧವರು ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು

    August 30, 2026

    ಹಾಸನ: ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ನಿಡುವಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪೆ ಗ್ರಾಮದಲ್ಲಿ ತೀವ್ರವಾದ ಕುಡಿಯುವ ನೀರಿನ ಅಭಾವ…

    ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್

    August 30, 2026

    ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ

    August 30, 2026

    KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    August 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.