ತುಮಕೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ, ಅವರ ಜನಪರ ಆಡಳಿತ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಶಾಸಕ ಬಿ.ಸುರೇಶ್ ಗೌಡ ತಿಳಿಸಿದರು.
ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಸಾಪ ಹಾಗೂ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣಾ ಸಮಿತಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿ ದಕ್ಷ ಆಡಳಿತಗಾರರಾಗಿ ಅವರು ಮಾಡಿದ ಅಭಿವೃದ್ಧಿ ಇಂದು ಬೆಂಗಳೂರನ್ನು ವಿಶ್ವ ಮಟ್ಟಕ್ಕೆ ಪರಿಚಯಿಸಿದೆ ಎಂದರು.
ಕೇಂದ್ರ ಸರ್ಕಾರ ನಾಡಪ್ರಭು ಕೆಂಪೇಗೌಡರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸುವ ನಿಟ್ಟಿನಲ್ಲಿ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಟ್ಟು, ಅವರ 105 ಅಡಿ ಎತ್ತರದ ಮೂರ್ತಿ ಸ್ಥಾಪಿಸಿ, ಇಡೀ ವಿಶ್ವಕ್ಕೆ ಕೆಂಪೇಗೌಡರನ್ನು ಪರಿಚಯಿಸುವ ಕೆಲಸ ಮಾಡಿದೆ. ಅವರು ನೀರಾವರಿ, ನೀರಿನ ನಿರ್ವಹಣೆಗೆ ಕೈಗೊಂಡ ಪದ್ಧತಿಗಳೂ ಬೆಂಗಳೂರು ಗ್ರೀನ್ ಸಿಟಿಯಾಗಿ, ಐಟಿ-ಬಿಟಿ ಹಬ್ ಆಗಿ ಬೆಳೆಯಲು ಕಾರಣವಾಗಿದೆ. ಕುಲಕಸುಬಿನ ಆಧಾರದಲ್ಲಿ ವ್ಯಾಪಾರಕ್ಕೆ ಅನುಕೂಲವಾಗಲು ನಿರ್ಮಿಸಿದ ಪೇಟೆಗಳು ಇಂದಿಗೂ ಮಾದರಿ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಮಾತನಾಡಿ, ಕೆಂಪೇಗೌಡರನ್ನು ಇಂದು ಕೇವಲ ಬೆಂಗಳೂರಿಗೆ ಸೀಮಿತಗೊಳಿಸಲಾಗಿದೆ. ಆದರೆ ಅವರು ಅಂದು ನೀಡಿದ ಯೋಜನೆಗಳನ್ನು ಹೇಗೆ ನಮ್ಮ ಜಿಲ್ಲೆಯ ಬೆಳವಣಿಗೆಗೆ ಬಳಕೆ ಮಾಡಬಹುದು ಎಂಬುದನ್ನು ಇಂದಿನ ಯುವಜನರು ಚಿಂತಿಸಬೇಕಿದೆ. ಅವರ ದೂರದೃಷ್ಟಿಯ ಯೋಜನೆಗಳು, ಅವುಗಳ ಉಪಯೋಗ ಕುರಿತು ಪುಸ್ತಕ ಮುದ್ರಿಸಿ ಎಲ್ಲರಿಗೂ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ರಾಜೇಶ್ವರಿ ಮಾತನಾಡಿ, ಕೆಂಪೇಗೌಡ ಅವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ವಿಶ್ವಮಾನವರು. ಎಲ್ಲ ವರ್ಗದ ಜನರು ಅವರ ಕುಲ ಕಸುಬಿನಿಂದ ಬಂದ ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ಒದಗಿಸಿ, ಜನರ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಕಾರಣರಾಗಿದ್ದರು. ನೂರಾರು ಕೆರೆ ಕಟ್ಟೆಗಳನ್ನು ನಿರ್ಮಿಸಿ, ಜನರ ಬದುಕಿಗೆ ಆಸರೆ ಒದಗಿಸಿದ್ದರು. ಇಂದಿಗೂ ಬೆಂಗಳೂರು ವಿಶ್ವದಲ್ಲಿಯೇ ಗಮನ ಸೆಳೆಯುವ ನಗರವಾಗಿದ್ದರೆ ಅದಕ್ಕೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ ಎಂದರು.
ಮಾಜಿ ಶಾಸಕ ಎಚ್.ನಿಂಗಪ್ಪ ಮಾತನಾಡಿ, ಜನರಿಗೆ ಕುಲಕಸುಬಿನ ಆಧಾರದಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಟ್ಟು, ಗಡಿಗಳನ್ನು ನಿರ್ಮಿಸಿ, ನಗರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ ಕೆಂಪೇಗೌಡರು, ವಿಜಯನಗರದ ಅರಸರ ಹಮ್ಮಿಕೊಳ್ಳಲಾಗಿದೆ. ಮ್ಯಾನ್ ಪ್ಲಾನ್ ಓಟಿ, ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ, ಮಾಗಡಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಕೋಟೆ ಸಮಗ್ರ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿದ್ದೇವೆ. ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು ಈಗಾಗಲೇ ಐದುವರೆ ಎಕರೆ ಖರೀದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಬೃಹತ್ ಪ್ರತಿಮೆಯ ಪಾದವನ್ನು ಮುಟ್ಟಿ ನಮಸ್ಕರಿಸಿದ ಮುಖ್ಯಮಂತ್ರಿಯವರು ಪ್ರತಿಮೆಯ ಪಾದಗಳಿಗೆ ಭಕ್ತಿಯಿಂದ ಪುಷ್ಪಾರ್ಚನೆ ಮಾಡಿ ನಮಿಸಿದರು. ನಂತರ ಪ್ರತಿಮೆಯ ಪಕ್ಕದಲ್ಲಿ ನಿರ್ಮಾಣ ಮಾಡಿರುವ ಥೀಮ್ ಪಾರ್ಕ್ ಅನ್ನು ವೀಕ್ಷಿಸಿದರು. ಇದಾದ ಬಳಿಕ ಬೆಂಗಳೂರು ಉತ್ತರ ಯಲಹಂಕ ಒಕ್ಕಲಿಗರ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘಕ್ಕೆ ರಿಯಾಯಿತಿ ದರದಲ್ಲಿ ಸಿಎಟಿ ಬಿ ನಿವೇಶನ ನೀಡುವುದಾಗಿ ಘೋಷಣೆ ಮಾಡಿದರು. ನಂತರ ವಿಧಾನ ಸೌಧದ ಮುಂದಿರುವ ಕುದುರೆಯ ಮೇಲೆ ವಿರಾಜಮಾನರಾಗಿರುವ ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಗಮನ ಸೆಳೆದ ವಾಲ್ ಆಫ್ ಗ್ರಾಟಿಟ್ಯೂಡ್: ಎಸ್.ಎಂ. ಕೃಷ್ಣ ರಸ್ತೆ (ಬೆಂಗಳೂರು-ಮೈಸೂರು ದಶಪಥ ರಸ್ತೆ) ಅಭಿವೃದ್ಧಿಗಾಗಿ ಯಾವುದೇ ವಿವಾದವಿಲ್ಲದೆ ಸ್ವಯಂಪ್ರೇರಿತರಾಗಿ ತಮ್ಮ ಭೂಮಿಯನ್ನು ಬಿಟ್ಟುಕೊಟ್ಟ ರೈತರು ಮತ್ತು ಸ್ಥಳೀಯರನ್ನು ಗೌರವಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ‘ವಾಲ್ ಆಫ್ ಗ್ರಾಟಿಟ್ಯೂಡ್’ (ಕೃತಜ್ಞತಾ ಫಲಕ) ನಿರ್ಮಿಸಿದೆ. ಮೈಸೂರು ರಸ್ತೆಯಲ್ಲಿರುವ ಈ ವಿಶೇಷ ಗೋಡೆಯು ರೈತರ ತ್ಯಾಗವನ್ನು ಸ್ಮರಿಸುತ್ತದೆ. ರಸ್ತೆ ಉದ್ಘಾಟನೆ ನಂತರ ಈ ಫಲಕವನ್ನು ಸಿಎಂ ಗಣ್ಯರ ಜೊತೆಗೂಡಿ ಲೋಕಾರ್ಪಣೆ ಮಾಡಿದರು. ಇದು ಎಲ್ಲರ ಗಮನ ಸೆಳೆಯಿತು.
ತದ ನಂತರ ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿ ಎಸ್.ಎಂ.ಕೃಷ್ಣ ದಶಪಥ ರಸ್ತೆಯ ಬಳಿ ಬೆಂಗಳೂರಿನ ನಾಲ್ಕು ದಿಕ್ಕುಗಳಿಂದಲೂ ಸಚಿವರುಗಳ ನೇತೃತ್ವದಲ್ಲಿ ತಂದಂತಹ ಪುರಜ್ಯೋತಿಗಳನ್ನು ಡಿ.ಕೆ. ಶಿವಕುಮಾರ್ ಅವರು ಸ್ವೀಕರಿಸಿದರು. ನಂತರ ಕೆಂಪೇಗೌಡರ ಕೋಟೆಯ ಪ್ರತಿಕೃತಿ ಎದುರು ಎಲ್ಲಾ ಪುರಜ್ಯೋತಿಗಳನ್ನು ಇಡಲಾಯಿತು. ಅದಕ್ಕೂ ಮೊದಲು ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿ ಎಸ್.ಎಂ.ಕೃಷ್ಣ ದಶಪಥ ರಸ್ತೆಯಲ್ಲಿ 10 ಕಿಲೋನ್, 5 ಕಿವಾಕಥಾನ್ ಏರ್ಪಡಿಸಲಾಗಿತ್ತು. ಸಾವಿರಾರು ಜನರು ನೂತನ ರಸ್ತೆಯಲ್ಲಿ ಓಡಿ ಸಂತಸಪಟ್ಟರು. ಈ ರಸ್ತೆ ಅಂತರರಾಷ್ಟ್ರೀಯ ಗುಣಮಟ್ಟದಿಂದ ಕೂಡಿದೆ ಎಂದು ಅಭಿಪ್ರಾಯ ಹಂಚಿಕೊಂಡರು. ನಂತರ ಪ್ರೇಮಾ ಕೃಷ್ಣ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಪರಿಷತ್ ಸದಸ್ಯರ ಜೊತೆಗೂಡಿ ನೂತನ ರಸ್ತೆಯನ್ನು ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಕೆ.ಎಚ್. ಮುನಿಯಪ್ಪ, ಕೃಷ್ಣ ಬೈರೇಗೌಡ, ಕರ್ನಾಟಕ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಶಾಸಕರಾದ ಪ್ರದೀಪ್ ಈಶ್ವರ್, ರಿಜ್ವಾನ್ ಅರ್ಷದ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿಪಿನ್ ಸಿಂಗ್, ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ, ಬೈಯಪ್ಪ ಸಿ ಬಿ ಹರಿಹರನ್, ಸದಸ್ಯರುಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ರಾಜಧಾನಿಯಲ್ಲಿ ಬಿಗಡಾಯಿಸಿರುವ ಸಂಚಾರ ದಟ್ಟಣೆ ಕೊಂಚ ಮಟ್ಟಿಗೆ ನಿವಾರಿಸಲು ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ. ಕೃಷ್ಣ ಅವರ ಹೆಸರಿನ ದಶಪಥ ರಸ್ತೆಯನ್ನು ಲೋಕಾರ್ಪಣೆಗೊಳಿಸಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಿಬ್ಬನ್ ಕಟ್ ಮಾಡುವ ರಸ್ತೆಯನ್ನು ಉದ್ಘಾಟಿಸಿದರು. ಈ ವೇಳೆ ಪ್ರೇಮಾ ಕೃಷ್ಣ, ಡಿಸಿಎಂ ಪರಮೇಶ್ವರ್, ಸಚಿವರಾದ ಕೆ.ಎಚ್ ಮುನಿಯಪ್ಪ, ಕೃಷ್ಣ ಬೈರೇಗೌಡ, ಬಿಡಿಎ ಅಧ್ಯಕ್ಷ ಬಾಲಕೃಷ್ಣ ಎ ಹ್ಯಾರಿಸ್ ಉಪಸ್ಥಿತರಿದ್ದರು.
ಕೆಂಪೇಗೌಡ ಪ್ರಶಸ್ತಿ ಪ್ರದಾನ:
ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ದೇಶದ ಪ್ರಮುಖ ಕೃಷಿ ಸಂಶೋಧನೆ ಹಾಗೂ ಶಿಕ್ಷಣ ಸಂಸ್ಥೆಯಾಗಿ, ಆಧುನಿಕ ಕೃಷಿ ಹಾಗೂ ನವೀನ ತಂತ್ರಜ್ಞಾನವನ್ನು ರೈತರಿಗೆ ಪರಿಚಯಿಸುವ ಮೂಲಕ ಹೆಸರು ಮಾಡಿರುವ ಜಿಕೆವಿಕೆ, ನಗರ ಯೋಜನಾ ತಜ್ಞರಾಗಿ ಪ್ರಸಿದ್ಧಿ ಹೊಂದಿರುವ ಇಂಜಿನಿಯರ್ ಎಸ್. ವಿಶ್ವನಾಥ್ ಅವರು ಹಾಗೂ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೆ ಪ್ರದಾನ ಮಾಡಲಾಯಿತು. ರಾಹುಲ್ ದ್ರಾವಿಡ್ ಅವರು ವಿದೇಶದಲ್ಲಿ ಇದ್ದ ಕಾರಣಕ್ಕೆ ಅವರು ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಜಿಕೆವಿಕೆ ಸಂಸ್ಥೆಯ ಪರವಾಗಿ ಉಪಕುಲಪತಿಗಳಾದ ಎಸ್.ವಿ.ಸುರೇಶ್ ಅವರು ಪಡೆದುಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




