nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026
    Facebook Twitter Instagram
    ಟ್ರೆಂಡಿಂಗ್
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಬಜೆಟ್ ಬಗ್ಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಟೀಕೆ
    ರಾಜ್ಯ ಸುದ್ದಿ February 3, 2023

    ಕೇಂದ್ರ ಬಜೆಟ್ ಬಗ್ಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಟೀಕೆ

    By adminFebruary 3, 2023No Comments2 Mins Read
    m laxman

    Provided by
    Provided by

    ಕೇಂದ್ರ ಬಜೆಟ್ ಬಗ್ಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಟೀಕಿಸಿದ್ದು, 120 ಲಕ್ಷ ಕೋಟಿ ರೂ. ಸಾಲ ಮಾಡಿರುವುದು ಬಿಜೆಪಿ ಸರ್ಕಾರದ ಸಾಧನೆ ಎಂದು ಕಿಡಿಕಾರಿದ್ದಾರೆ.

    ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಈ ಬಾರಿಯ ಕೇಂದ್ರ ಬಜೆಟ್ ವೇಳೆ  ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶಕ್ಕೆ 155 ಲಕ್ಷ ಕೋಟಿ ಸಾಲವಿದ್ದು, ವರ್ಷಾಂತ್ಯಕ್ಕೆ 18ಲಕ್ಷ ಕೋಟಿ ಹೊಸ ಸಾಲ ಪಡೆಯುವುದಾಗಿ ಹೇಳಿದ್ದಾರೆ. ಈ ಮೂಲಕ ದೇಶದ ಸಾಲ ವರ್ಷಾಂತ್ಯಕ್ಕೆ 173 ಲಕ್ಷ ಕೋಟಿಗೆ ಏರಿಕೆಯಾಗಲಿದೆ. 1947ರಿಂದ 2014ರವರೆಗೆ ದೇಶದ ಮೇಲೆ ಇದ್ದ ಸಾಲ 53 ಲಕ್ಷ ಕೋಟಿ. ಆದರೆ ಕಳೆದ ಎಂಟು ವರ್ಷಗಳ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿರುವುದು ಬಿಜೆಪಿ ಸರ್ಕಾರದ ಸಾಧನೆಯಾಗಿದೆ. ದೇಶ ಪ್ರತಿವರ್ಷ 10.81 ಲಕ್ಷ ಕೋಟಿ ಬಡ್ಡಿ ಕಟ್ಟಬೇಕಿದೆ.ಅಂದರೆ 100 ರೂಪಾಯಿಯಲ್ಲಿ 42 ರೂಪಾಯಿ ಬಡ್ಡಿಗೆ ಹೋಗಲಿದೆ. ಈ ರೀತಿ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶದ ಜಿಡಿಪಿ ದರ 8.7% ಇತ್ತು. ದೇಶದ ಜಿಡಿಪಿ ದರ ಈಗ 6%ಕ್ಕೆ ಇಳಿದಿದೆ. 2004ರಿಂದ 2014ರವರೆಗೆ 13% ತಲಾದಾಯವಿತ್ತು. 2014ರಿಂದ 2023ರವರೆಗೆ ತಲಾದಾಯ 9% ಕ್ಕೆ ಕುಸಿದಿದೆ ಎಂದು ಎಂ ಲಕ್ಷ್ಕಣ್ ಹರಿಹಾಯ್ದರು.

    ಇದೇ ವೇಳೆ ಸಂಸದ ಪ್ರತಾಪ್ ಸಿಂಹ ವಿರುದ್ದವೂ ಗುಡುಗಿದ ಎಂ.ಲಕ್ಷ್ಮಣ್ , ಮೈಸೂರು ಕೊಡಗು ಜಿಲ್ಲೆಗೆ ಕಳೆದ ಎಂಟು ವರ್ಷಗಳಿಂದ ಸಂಸದ ಪ್ರತಾಪ್ ಸಿಂಹ ನೀಡಿರುವ ಕೊಡುಗೆ ಏನು.? ಯಾವ್ಯಾವ ಹೊಸ ಯೋಜನೆಗಳನ್ನು ತಂದಿದ್ದಾರೆ ಎಂಬುದನ್ನು ಸಂಸದ ಪ್ರತಾಪ್ ಸಿಂಹ ತಿಳಿಸಲಿ‌. ಸಂಸದರ ಅನುದಾನ ಬಳಕೆ ಬಗ್ಗೆ ಪ್ರತಾಪ್ ಸಿಂಹ ಬಹಿರಂಗ ಚರ್ಚೆಗೆ ಬರಲಿ. ರಾಜ್ಯದ ಸಂಸದರು ಯಾವುದೇ ಅನುದಾನ ಕೇಳಲು ಭಯಪಡುತ್ತಿದ್ದಾರೆ ಎಂದು ಟೀಕಿಸಿದರು.


    Provided by
    Provided by

    ಸ್ಯಾಂಟ್ರೋರವಿ ಪ್ರಕರಣ ಸಂಬಂಧ ತನಿಖಾಧಿಕಾರಿ ದಿಢೀರ್ ವರ್ಗಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ.ಲಕ್ಷ್ಮಣ್, ತನಿಖೆ ದಿಕ್ಕು ತಪ್ಪಿಸಲು ಹೀಗೆ ಮಾಡ್ತಾರೆ. ಸ್ಯಾಂಟ್ರೋರವಿ ಬಾಂಬೆ ಬಾಯ್ಸ್‌ಯಿಂದ ಹಿಡಿದು ಇಲ್ಲಿಯವರೆಗೆ ಲಿಸ್ಟ್ ಕೊಟ್ಟಿದ್ದಾರೆ. ಯಾರ್ಯಾರು ಏನೇನು ಮಾಡಿದ್ರು ಅಂತಾ ಕಂಪ್ಲೀಟಾಗಿ ಗೊತ್ತಾಗ್ತದೆ. ಏನು ಕ್ರಮ ಆಗಿಲ್ಲ. ಯಾವ ರೀತಿ ತನಿಖೆ ಆಗ್ತಿದೆ ಅಂತಾ ನೀವೇ ನೋಡಿ. ಅದೇ ರೀತಿ ಬಿಟ್‌ ಕಾಯಿನ್ ಶ್ರೀಕಿ ಬದುಕಿದ್ದಾನೋ ಸತ್ತಿದ್ದಾನೋ ಅಂತಾನು ಹೇಳ್ತಾ ಇಲ್ಲ. ಹಾಗೇ ಅಧಿಕಾರಿಗಳನ್ನು ತಮಗೆ ಬೇಕಾದ ಹಾಗೆ ಬಳಸಿಕೊಳ್ತಾರೆ. ಸ್ಯಾಂಟ್ರೋರವಿ ಪ್ರಕರಣ ತನಿಖಾಧಿಕಾರಿ ಪ್ರಮಾಣಿಕವಾಗಿ ತನಿಖೆ ಮಾಡಿದ್ದಾರೆ. ಅದಕ್ಕೆ ಅವರನ್ನ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು…

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.