ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಡೂರಿಗೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.
ಇಂದು ದೆಹಲಿಯಿಂದ 12.50ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುಮ ಅಮಿತ್ ಶಾ ಸಂಡೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ1.30ಕ್ಕೆ ಸಂಡೂರಿಗೆ ಆಗಮಿಸಲಿದ್ದು, 1.30ರಿಂದ 2.30ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಈ ಮಧ್ಯೆ, ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಹಾಗೂ ಬೆಳಗಾವಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೈಕ್ ರಾಲಿ, ರೋಡ್ ಶೋ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ರಾಣಿ ಚನ್ನಮ್ಮ ವೃತ್ತ ಇಲ್ಲವೇ ಸಂಭಾಜಿ ವೃತ್ತದಿಂದ ರೋಡ್ ಶೋಗೆ ಸಿದ್ಧತೆ ಮಾಡಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


