ನವದೆಹಲಿ: ಕಳೆದ ವರ್ಷ ದೆಹಲಿಯ ಜನತೆ 1.75 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಆದಾಯ ತೆರಿಗೆ ಪಾವತಿಸಿದೆ. ಆದರೆ ಕೇಂದ್ರ ಸರ್ಕಾರ ದೆಹಲಿಯ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಕೇವಲ 325 ಕೋಟಿ ರೂಪಾಯಿ ನಿಗದಿ ಪಡಿಸಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳಿಗೆ ಬಜೆಟ್ ಯಾವುದೇ ಪರಿಹಾರ ನೀಡಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯ ಜನ 1.75 ಲಕ್ಷ ಕೋಟಿ ರೂ.ಗೂ ಹೆಚ್ಚು ಆದಾಯ ತೆರಿಗೆ ಪಾವತಿಸಿದ್ದಾರೆ. ಅದರಲ್ಲಿ ಕೇವಲ 325 ಕೋಟಿ ರೂ. ದೆಹಲಿಯ ಅಭಿವೃದ್ಧಿಗೆ ನೀಡಲಾಗಿದೆ. ಇದು ದೆಹಲಿ ಜನತೆಗೆ ಮಾಡಿದ ಘೋರ ಅನ್ಯಾಯ ಎಂದು ಅವರು ಸರಣಿ ಟ್ವೀಟ್ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


