ನವದೆಹಲಿ: ಲಡಾಖ್ ನಲ್ಲಿ ಸುಮಾರು 2000 ಚದರ ಕಿ.ಮೀ. ಭಾರತದ ಭೂಮಿ ಚೀನಾ ವಶದಲ್ಲಿದೆ ಎಂದು ರಾಹುಲ್ ಗಾಂಧಿ ಮತ್ತೆ ಆರೋಪ ಮಾಡಿದ್ದು, ಸತ್ಯವನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಅಪಾಯಕಾರಿ ಎಂದಿದ್ದಾರೆ.
ಚೀನೀಯರು ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂಬುದನ್ನು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರದ ನಡೆ ಅತ್ಯಂತ ಅಪಾಯಕಾರಿ. ಇನ್ನೂ ಹೆಚ್ಚು ಆಕ್ರಮಣಕಾರಿ ಯೋಜನೆಗಳನ್ನು ರೂಪಿಸಲು ಚೀನಿಯರನ್ನು ಪ್ರೇರೇಪಿಸುತ್ತದೆ ಎಂದು ಎಚ್ಚರಿಕೆ ನೀಡಿದರು.
ಚೀನಿಯರೊಂದಿಗೆ ವ್ಯವಹರಿಸುವ ಮಾರ್ಗವೆಂದರೆ ಅವರೊಂದಿಗೆ ದೃಢವಾಗಿ ವ್ಯವಹರಿಸುವುದು ಮತ್ತು ಅವರು ನಮ್ಮ ನೆಲವನ್ನು ಕಬಳಿಸಿರುವುದನ್ನು ನಾವು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಬೇಕು ಎಂದು ರಾಹುಲ್ ಗಾಂಧಿ ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


