ಸರ್ಕಾರಿ ತಾಂತ್ರಿಕ ತರಬೇತಿ ಸಂಸ್ಥೆ ಕಿಯೋನಿಕ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
2009ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಇಂಟರ್ನಲ್ ಸೆಕ್ಯೂರಿಟಿ ವಿಭಾಗಕ್ಕೆ ವರ್ಗಾವಣೆ ಮಾಡಿದೆ.
ಇನ್ನೂ ಇವರಷ್ಟೇ ಅಲ್ಲದೆ ಟೂರಿಸಂ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪೀಲ್ ಮೋಹನ್ ಅವರನ್ನು, ಕಾರವಾರದ ಕರ್ನಾಟಕ ಮರಿಟೈಮ್ ಬೋರ್ಡ್ ಸಿಇಓ ಆಗಿ ನೇಮಿಸಿದೆ.
ಐಎಎಸ್ ಅಧಿಕಾರಿ ಡಾ.ರಿಚರ್ಜ್ ವಿನ್ಸೆಂಟ್ ಡಿಸೋಜಾ ಅವರನ್ನು ಎಂಎಸ್ಎಂಇ ಮತ್ತು ಮೈನಿಂಗ್ ಹುದ್ದೆಯ ಜೊತೆಗೆ, ಹೆಚ್ಚುವರಿಯಾಗಿ ಗೌರ್ನಮೆಂಟ್ ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಸ್ಟಿಕ್ಸ್ ವಿಭಾಗದ ಕಾರ್ಯದರ್ಶಿಯ ಹೊಣೆಗಾರಿಕೆಯನ್ನು ವಹಿಸಿ ಆದೇಶಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


