ಅಲಪ್ಪುಳ: ಕೇರಳದಲ್ಲಿ ಎಸ್‌ಡಿಪಿಐ ಮತ್ತು ಬಿಜೆಪಿ ನಡುವಿನ ರಾಜಕೀಯ ದ್ವೇಷಕ್ಕೆ ಭಾನುವಾರ ಉಭಯ ಪಕ್ಷಗಳ ಇಬ್ಬರು ಮುಖಂಡರ ಕೊಲೆ ನಡೆದಿದೆ.
ಆಲಪ್ಪುಳ ಜಿಲ್ಲೆಯಲ್ಲಿ ಈ ಎರಡೂ ಕೊಲೆ ನಡೆದಿದ್ದು, ಶನಿವಾರ ತಡರಾತ್ರಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಎ. ಎಸ್. ಶಾನ್(38) ಅವರನ್ನು ಹತ್ಯೆ ಮಾಡಿದ ನಂತರ, ಇಂದು ಬೆಳಗಿನ ಜಾವ ಬಿಜೆಪಿಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರೆಂಜಿತ್ ಶ್ರೀನಿವಾಸನ್(40) ಅವರ ಮನೆಗೆ ನುಗ್ಗಿದ ಗುಂಪೊಂದು ಅವರನ್ನು ಹತ್ಯೆ ಮಾಡಿದೆ.
ಎರಡು ಕೊಲೆಯ ನಂತರ ಪರಿಸ್ಥಿತಿ ಉದ್ವಿಗ್ನ ಗೊಂಡಿರುವುದರಿಂದ, ಭಾನುವಾರ ಮತ್ತು ಸೋಮವಾರ ಎರಡು ದಿನಗಳ ಕಾಲ ಅಲಪ್ಪುಳ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿನ್ನೆ ರಾತ್ರಿ ಅಲಪ್ಪುಳದ ಮನ್ನಂಚೇರಿ ಬಳಿಯ ಪೊನ್ನಾಡ್ ಎಂಬಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಶಾನ್ ಅವರಿಗೆ ಬೈಕ್ ಗೆ ಕಾರು ಡಿಕ್ಕಿ ಹೊಡೆಸಿದ ದುಷ್ಕರ್ಮಿಗಳು, ಎಸ್ ಡಿಪಿಐ ನಾಯಕ ಕೆಳಗೆ ಬೀಳುತ್ತಿದ್ದಂತೆಯೇ ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700