ಕೇರಳದ ಸ್ಟೋರಿಯನ್ನು ತಮಿಳುನಾಡಿನಲ್ಲಿ ನಿಷೇಧಿಸಿಲ್ಲ: ತಮಿಳುನಾಡು ಸರ್ಕಾರ
ಕೇರಳದ ಸ್ಟೋರಿಯನ್ನು ತಮಿಳುನಾಡಿನಲ್ಲಿ ನಿಷೇಧಿಸಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿತ್ತು. ಆದರೆ ನಕರಾತ್ಮಕ ಪ್ರತಿಕ್ರಿಯೆಗಳ ಹಿನ್ನೆಲೆಯಲ್ಲಿ ಪ್ರದರ್ಶನವನ್ನು ನಿಲ್ಲಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.
ದಿ ಕೇರಳ ಸ್ಟೋರಿ ಮೇ 5 ರಂದು ಬಿಡುಗಡೆಯಾಯಿತು. ಇದುವರೆಗಿನ ಅಂದಾಜಿನ ಪ್ರಕಾರ ಚಿತ್ರ ಒಂಬತ್ತು ದಿನಗಳಲ್ಲಿ 100 ಕೋಟಿ ಕ್ಲಬ್ ಪ್ರವೇಶಿಸಿದೆ ಎಂದು ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮಾಡಿದ್ದಾರೆ.
ಮೊದಲ ವಾರದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚಿತ್ರ,ಎರಡನೇ ವಾರದಲ್ಲಿ ಶುಕ್ರವಾರ 12.35 ಕೋಟಿ ಹಾಗೂ ಶನಿವಾರ 19.50 ಕೋಟಿ ರೂ. ಇದು ಭಾರತೀಯ ಬಾಕ್ಸ್ ಆಫೀಸ್ ಅಂಕಿ ಅಂಶವಾಗಿದೆ.
ಕೇರಳ ಸ್ಟೋರಿ ಒಟ್ಟು 112.99 ಕೋಟಿ ಕಲೆಕ್ಷನ್ ಮಾಡಿದೆ. ಸುದೀಪ್ತೋ ಸೇನ್ ನಿರ್ದೇಶನದ ಈ ಚಿತ್ರ ಮೊದಲ ದಿನವೇ 7.5 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಈ ಕಲೆಕ್ಷನ್ ಜೊತೆಗೆ ಈ ಚಿತ್ರಕ್ಕೆ ಭಾರೀ ವಿರೋಧ ಕೂಡ ವ್ಯಕ್ತವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


