ಉಡುಪಿ: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಕೇರಳ ಸ್ಟೋರಿ ಚಿತ್ರದ ಪ್ರಚಾರ ಕಾರ್ಯ ನಡೆದಿದೆ. ರಾಷ್ಟ್ರಾದ್ಯಂತ ಭಾರೀ ಚರ್ಚೆ ಎಬ್ಬಿಸಿರುವ ಚಲನಚಿತ್ರದಲ್ಲಿ ಲವ್ ಜಿಹಾದ್ ಕುರಿತು ಬೆಳಕು ಚೆಲ್ಲಲಾಗಿದೆ.
ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳದ ಭಕ್ತರೇ ಹೆಚ್ಚು. ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ಚಿತ್ರ ನೋಡಿ ಎಂಬ ಬೋರ್ಡ್ ಕೊಲ್ಲೂರಿಗೆ ಬರುವ ಪ್ರವಾಸಿಗರ ಗಮನ ಸೆಳೆಯುತ್ತಿದೆ. ಆಂಗ್ಲ ಭಾಷೆಯಲ್ಲಿ ಬೋರ್ಡ್ ಇದೆ
ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಾದ ವಿನೋದ್ ಕೊಲ್ಲೂರು, ವಿಜಯ ಬಳೆಗಾರ್, ಸಂತೋಷ್ ಭಟ್, ಪ್ರಕಾಶ್ ಹಳ್ಳಿ ಬೇರು, ಹರೀಶ್ ಶೆಟ್ಟಿ ನೇತೃತ್ವದಲ್ಲಿ ದೇವಾಲಯದ ದ್ವಾರ ಹಾಗೂ ಆವರಣದ ಎರಡು ಕಡೆ ಬ್ಯಾನರ್ ಅಳವಡಿಸಿದ್ದಾರೆ. ಬ್ಯಾನರ್ ಅಳವಡಿಕೆಗೆ ಪಂಚಾಯತ್ ಪರವಾನಿಗೆ ಕೂಡಾ ಮಾಡಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


