ಬೆಂಗಳೂರು ನಗರದಲ್ಲಿ ಕೆಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಆರೋಪಿ ಬೆನಸ್ಟಿನ್ ರಾಯ್‌ನನ್ನು (22) ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಕೇರಳದ ಬೆನಸ್ಟಿನ್ ರಾಯ್, ಕೆಂಗೇರಿ ಬಳಿಯ ಪ್ಯಾರಾಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿ. ಡ್ರಗ್ಸ್ ವ್ಯಸನಿಯಾಗಿದ್ದ ಈತ, ಕ್ರಮೇಣ ಪೆಡ್ಲರ್ ಆಗಿ ಮಾರ್ಪಟ್ಟಿದ್ದ. ನಗರದ ಹಲವು ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಿ ಹಣ ಸಂಪಾದಿಸುತ್ತಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಡ್ರಗ್ಸ್ ಮಾರಾಟದ ಬಗ್ಗೆ ಮಾಹಿತಿ ಬರುತ್ತಿದ್ದ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. * 20 ಲಕ್ಷ ಮೌಲ್ಯದ 200 ಗ್ರಾಂ ಎಂಡಿಎಂಎ, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದ ಎಂದು ತಿಳಿಸಿವೆ.
ಕೇರಳದಿಂದ ಡ್ರಗ್ಸ್ ತರಿಸುತ್ತಿದ್ದ: ‘ಎರಡು ವರ್ಷಗಳ ಹಿಂದೆ ವಿದ್ಯಾಭ್ಯಾಸಕ್ಕೆಂದು ಬೆನಸ್ಟಿನ್ ರಾಯ್ ನಗರಕ್ಕೆ ಬಂದಿದ್ದ. ಕೆಲ ಸ್ನೇಹಿತರ ಜೊತೆ ಸೇರಿ, ಡ್ರಗ್ಸ್ ವ್ಯಸನಿಯಾಗಿದ್ದ. ಕೇರಳದಲ್ಲಿ ಡ್ರಗ್ಸ್ ಮಾರುತ್ತಿದ್ದವರ ಜೊತೆ ಒಡನಾಟ ಬೆಳೆಸಿಕೊಂಡಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಕೇರಳದಿಂದ ಡ್ರಗ್ಸ್ ತರಿಸುತ್ತಿದ್ದ ಆರೋಪಿ, ಅದನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮಾರುತ್ತಿದ್ದ. ಕೆಲ ಕಂಪನಿ ಉದ್ಯೋಗಿಗಳಿಗೂ ಡ್ರಗ್ಸ್ ಮಾರುತ್ತಿದ್ದ ಮಾಹಿತಿ ಇದೆ. ಆರೋಪಿ ಜೊತೆ ಮತ್ತಷ್ಟು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಅನುಮಾನವಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


