ಎಡಪಕ್ಷಗಳ ಆಡಳಿತವಿರುವ ಕೇರಳದಲ್ಲೂ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ.
ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ನಾವು ಸರ್ಕಾರ ರಚಿಸುವ ರೀತಿಯಲ್ಲಿ ಬಿಜೆಪಿ ಮೈತ್ರಿಕೂಟವು ಮುಂದಿನ ದಿನಗಳಲ್ಲಿ ಕೇರಳದಲ್ಲಿ ಸರ್ಕಾರ ರಚಿಸುತ್ತದೆ ಎಂಬ ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ತ್ರಿಪುರಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಡ-ಕಾಂಗ್ರೆಸ್ ಮೈತ್ರಿಯನ್ನು ವ್ಯಂಗ್ಯವಾಡಿದ ಪ್ರಧಾನಿ, ಈ ಪಕ್ಷಗಳು ಕೇರಳವನ್ನು ಲೂಟಿ ಮಾಡುತ್ತಿವೆ ಎಂದು ಹೇಳಿದ ಮೋದಿ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿದರು.
ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣೆಗಳಲ್ಲಿ ಬಿಜೆಪಿ ಪರವಾಗಿರುವ ವಿಧಾನಸಭಾ ಫಲಿತಾಂಶದಿಂದ ಉತ್ತೇಜಿತರಾಗಿರುವ ಪ್ರಧಾನಿ ನರೇಂದ್ರ ಮೋದಿ ಕೇರಳದಲ್ಲೂ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂದು ತಿಳಿಸಿದರು.
ಜತೆಗೆ ಚುನಾವಣಾ ಫಲಿತಾಂಶದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA