ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಮಾವತ್ತೂರು ಗ್ರಾಮದ ದೊಡ್ಡಕೆರೆಗೆ ಬಿಜೆಪಿ ಮುಖಂಡರದ ಕೆ.ಎಂ.ಮುನಿಯಪ್ಪರವರು ರೈತರೊಂದಿಗೆ ತೆರಳಿ ತುಂಬಿದ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಬಳಿಕ ಮಾತನಾಡಿದ ಅವರು, 25 ವರ್ಷಗಳ ನಂತರ ಕೂಡಿಬಿದ್ದ ಮಾವತ್ತೂರು ಕೆರೆ ತುಂಬಿ, ಹರಿಯುತ್ತಿರುವ ನದಿಗಳು ಮತ್ತು ಕೆರೆಗಳಿಗೆ ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ರೈತರ ಬದುಕಿನಲ್ಲಿ ಜೀವನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗಿದೆ ಎಂದು ಹೇಳಿದರು.
ಬಯಲು ಸೀಮೆಯ ಭಾಗವಾದ ಕೊರಟಗೆರೆ ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅದರಲ್ಲೂ ಈ ಬಾರಿ ನಿರೀಕ್ಷೆಗೂ ಮೀರಿದ ಮಳೆಯಾಗಿ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, ನೀರು ತುಂಬಿರುವ ಹಿನ್ನೆಲೆಯಲ್ಲಿ ಕೆರೆಗಳನ್ನು ಪೂಜಿಸುವುದು ಕರ್ತವ್ಯವಾಗಿದೆ ಎಂದರು.
ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ, ಪ್ರತಿ ವರ್ಷ ಕೆರೆಗಳು ತುಂಬುವ ಮೂಲಕ ರೈತರಿಗೆ ದಯೆ ತೋರಲಿ ಈ ನಿಟ್ಟಿನಲ್ಲಿ ಕ್ಷೇತ್ರದ ಅನ್ನದಾತರ ಬೆನ್ನೆಲುಬಾಗಿ ನಿಂತು ಕೆಲಸ ಮಾಡಲು ನಾನು ಸದಾ ಸಿದ್ಧನಿರುತ್ತಾನೆ ಎಂದು ಹಾರೈಸಿದರು. ಬಿಜೆಪಿ ಮುಖಂಡರು, ಸಊರಿನ ಗ್ರಾಮಸ್ಥರು ಹಾಗೂ ಮುತ್ತೈದೆ ಮಹಿಳೆಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz