ರಾತ್ರಿ ಸುರಿದ ಧಾರಾಕಾರ ಮಳೆಗೆ ಯುವಕನೋರ್ವ ಕೆರೆಯಲ್ಲಿ ಮುಳುಗಿ ದುರ್ಮರಣ ಹೊಂದಿರುವ ಘಟನೆ ಬೆಳಕಿಗೆ ಬಂದಿದ್ದು, ಒಟ್ಟಾರೆ, ಮಹಾಮಳೆಗೆ ಬೆಂಗಳೂರಿನಲ್ಲಿ ಮೂವರು ಕೊನೆಯುಸಿರೆಳೆದಿದ್ದಾರೆ.
ದೀಪಕ್ ಎಂಬಾತ ಮೃತ ಯುವಕನಾಗಿದ್ದು, ನಿನ್ನೆ ರಾತ್ರಿ ೧೧ ಗಂಟೆ ಸುಮಾರಿಗೆ ಸ್ನೇಹಿತನ ರವಿಚಂದ್ರ ಜೊತೆಗೆ ಕಾರಿ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮಾಗಡಿ ರಸ್ತೆಯ ತಾವರೆಕೆರೆಯ ಸೀಗೆಹಳ್ಳಿ ಗೇಟ್ ಬಳಿ ದುರಂತ ಸಂಭವಿಸಿದೆ.
ಅಲ್ಲದೆ, ತಿರುವಿನಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ರಸ್ತೆಯ ಅಂಚು ಗೊತ್ತಾಗದೆ ಕೆರೆಗೆ ಕಾರು ಇಳಿದಿದ್ದು ಆಗ ಮುಳುಗಲು ಶುರುವಾಗುತ್ತಿದ್ದಂತೆ ರವಿಚಂದ್ರ ಬಾಗಿಲು ತೆಗೆದು ಹೊರಬಂದಿದ್ದಾನೆ. ಆದರೆ ದೀಪಕ್ ಕಾರ್ ನಿಂದ ಆಚೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಘಟನೆ ಬಳಿಕ ಅಗ್ನಿಶಾಮಕ ದಳ ಮತ್ತು ಎಸ್.ಡಿ.ಆರ್.ಎಫ್ ಸಿಬ್ಬಂದಿ ಕಾರ್ಯಾಚರಣ ನಡೆಸಿ ಕೆರೆಯಿಂದ ಮೃತದೇಹ ಮತ್ತು ಕಾರು ಹೊರತೆಗೆಯಲಾಗಿದೆ.ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB