ಕೊರಟಗೆರೆ: ತಾಲ್ಲೂಕು ಥರಟಿ ಗ್ರಾಮದ ಕೆರೆಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದ್ದು, ಸ್ಥಳೀಯರ ನೆರವಿನೊಂದಿಗೆ ಕೆರೆಯಲ್ಲಿದ್ದ ಮೃತದೇಹವನ್ನು ಮೇಲೆತ್ತಲಾಗಿದೆ.
ಇಲ್ಲಿನ ನಿವಾಸಿ ಧರ್ಮಯ್ಯ ಎಂಬವರ ಪುತ್ರ ನಾಗರಾಜು ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಆದರೆ ಈ ಸಾವು ಹೇಗೆ ಸಂಭವಿಸಿತು ಎನ್ನುವುದು ಇನ್ನೂ ತಿಳಿದು ಬಂದಿಲ್ಲ ಸಂಬಂಧ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಕೊರಟಗೆರೆ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700