ಬೆಂಗಳೂರು: ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ, ಭಾರತ್ ಜೋಡೋ ಯಾತ್ರಾ ಟ್ವಿಟರ್ ಹ್ಯಾಂಡಲ್ ಗಳನ್ನು ನಿರ್ಬಂಧಿಸಿ ಬೆಂಗಳೂರು ನ್ಯಾಯಾಲಯ ಆದೇಶ ನೀಡಿದೆ.
ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಸಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದ್ದು, ಸಂಸ್ಥೆಯು ದೂರು ದಾಖಲಿಸಿತ್ತು.
ಕೆಜಿಎಫ್ ಸಿನಿಮಾದ ಸುಲ್ತಾನಾ..ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz