ಕೋಲಾರ : ಸರ್ಕಾರಿ ಗೋಮಾಳ ಜಮೀನಿನಲ್ಲಿ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಲು ತಹಶಿಲ್ದಾರ್ ಹಾಗೂ ಆರ್ ಐ ಅಡ್ಡಗಾಲು ಹಾಕುತ್ತಿದ್ದಾರೆಂದು ಆರೋಪಿಸಿ ಕೆಜಿಎಫ್ ತಾಲೂಕಿನ ದಾಸೇನಹಳ್ಳಿ ಗ್ರಾಮಸ್ಥರು ಕೋಲಾರ ಜಿಲ್ಲಾಧಿಕಾರಿ ಸೆಲ್ವಮಣಿ ಅವರಿಗೆ ದೂರು ನೀಡಿದ್ದಾರೆ.
ಕೊಡಿಗೇಪಲ್ಲಿ ಗ್ರಾಮದ ಸರ್ವೆ ನಂಬರ್ 109 ರಲ್ಲಿ 3 ಎಕರೆ 23 ಗುಂಟೆ ಗೋಮಾಳ ಜಮೀನಿನಲ್ಲಿ ಸ್ಮಶಾನಕ್ಕೆ ಹಾಗೂ ನಿವೇಶನ ರಹಿತರಿಗೆ ಜಾಗವನ್ನು ಮಂಜೂರು ಮಾಡುವಂತೆ ಕಳೆದ ಒಂದುವರೆ ವರ್ಷದಿಂದ ಸಂಬಂಧಪಟ್ಟ ವಿಎ, ಆರ್ ಐ ಹಾಗೂ ತಹಶಿಲ್ದಾರ್ ಅವರಿಗೆ ಮನವಿ ಮಾಡಿದ್ದರು. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ.
ಇತ್ತೀಚೆಗೆ ಗ್ರಾಮದ ಜನ ತಹಶಿಲ್ದಾರ್ ಅವರ ಕಚೇರಿಗೆ ತೆರಳಿ ತಮ್ಮ ಕಷ್ಟ ಹೇಳಿಕೊಂಡ ಹಿನ್ನೆಲೆ ನೆಪಮಾತ್ರಕ್ಕೆ ತಹಶಿಲ್ದಾರ್ ಹಾಗೂ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.ಆ ಬಳಿಕ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಪ್ರವೇಶಿಸಿರುವ ವ್ಯಕ್ತಿಗಳಿಂದ ಹಣ ಪಡೆದು ಅವರ ತಹಶೀಲ್ದಾರ್ ಶಾಮಿಲಾಗಿದ್ದಾರೆಂದು ಗ್ರಾಮಸ್ಥರು ಆರೋಸಿದ್ದಾರೆ.
ಅಲ್ಲದೇ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ತಕ್ಷಣ ಗ್ರಾಮಸ್ಥರ ಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಇನ್ನು ಎರಡು ಮೂರು ದಿನಗಳಲ್ಲಿ ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy