ಬೀದರ್: ಬೇಸಿಗೆ ಕಾಲ ಹತ್ತಿರ ಬಂದಿರುವುದರಿಂದ ಬೀದರ ಜಿಲ್ಲೆಯಲ್ಲಿನ ಕುಡಿಯುವ ನೀರು ಸರಬರಾಜು ಮತ್ತು ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈಶ್ವರ ಖಂಡ್ರೆ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು.
ಈ ವರ್ಷ ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದಿದ್ದು, ಬೇಸಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗುವ ಸಾಧ್ಯತೆ ಇರುವ ಪ್ರದೇಶಗಳಿಗೆ ನೀರು ಒದಗಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ತೆಗೆದುಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು.
ಜನಸಾಮಾನ್ಯರಿಗೆ ಕುಡಿಯುವ ನೀರನ್ನು ಒದಗಿಸಲು ನೀರು ಲಭ್ಯವಿರುವ ಖಾಸಗಿಯವರ ಬಾವಿ, ಕೊಳವೆ ಬಾವಿಗಳನ್ನು ಗುರುತಿಸಿಟ್ಟುಕೊಂಡು ಅಗತ್ಯ ಕಂಡುಬಂದಲ್ಲಿ, ಟ್ಯಾಂಕರ್ ಮುಖಾಂತರ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್, ದಿಲೀಪ್ ಬಡೋಲೆ, ಪೊಲೀಸ್ ಅಧೀಕ್ಷಕರಾದ ಚನ್ನಬಸವಣ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಾ ಎಂ.ಎಂ ಉಪಸ್ಥಿತರಿದ್ದರು.
ವರದಿ: ಅರವಿಂದ, ಮಲ್ಲಿಗೆ ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


