ಬೀದರ್: ಜಿಲ್ಲೆಯ ಖಟಕ ಚಿಂಚೋಳಿ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಖಟಕ ಚಿಂಚೋಳಿ ಪೊಲೀಸ್ ಠಾಣೆಯ ಪಿ.ಎಸ್.ಐ.ಸುದರ್ಶನ್ ರೆಡ್ಡಿ ಅವರು ತಮ್ಮ ಸಿಬ್ಬಂದಿಯೊಂದಿಗೆ ಠಾಣಾ ವ್ಯಾಪ್ತಿಯ ಚಳಕಾಪೂರ ಗ್ರಾಮದಲ್ಲಿ ಅಪರಾಧ ತಡೆಯಲು ಸಾರ್ವಜನಿಕರು ಯಾವ ರೀತಿ ಸಜ್ಜರಾಗಬೇಕು ಮತ್ತು ಪೋಕ್ಸೊ ಕಾಯ್ದೆ ಬಗ್ಗೆ ಹಾಗೂ ಇತರೆ ಕಾನೂನುಗಳ ಬಗ್ಗೆ ಗ್ರಾಮದ ಶಾಲಾ ಮಕ್ಕಳಿಗೆ ಮತ್ತು ಗ್ರಾಮದ ಬಸವೇಶ್ವರ ವೃತ್ತದ ಹತ್ತಿರ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತೀ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಖಟಕ ಚಿಂಚೋಳಿ ಪೊಲೀಸರು ಸಾರ್ವಜನಿಕರಲ್ಲಿ ಉತ್ತಮ ಜ್ಞಾನವನ್ನು ಮೂಡಿಸುವ ಮಹತ್ವದ ಕಾರ್ಯದಲ್ಲಿ ತೊಡಗಿದ ಅಧಿಕಾರಿ, ಸಿಬ್ಬಂದಿರವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx