ಬೆಂಗಳೂರು: ನೂತನ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗಿರುವ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಈ ಪಟ್ಟಿಯ ಬಗ್ಗೆ ಇದೀಗ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


