ಹಾಸನ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ನಡೆದಿದ್ದು, ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮುಂಜಾನೆ ಚಿಕ್ಕಮಗಳೂರಿನಿಂದ ಸುಬ್ರಮಣ್ಯಕ್ಕೆ ಡಾ.ಶೇಷಾದ್ರಿ ಅವರು ಪತ್ನಿಯೊಂದಿಗೆ ಕಿಯಾ ಕಾರಿನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ರಸ್ತೆಬದಿ ಕಾರು ನಿಲ್ಲಿಸಿ ದಂಪತಿ ಕೆಳಗಿಳಿದು ಪ್ರಾಣ ರಕ್ಷಿಸಿಕೊಂಡಿದ್ದಾರೆ. ನೋಡನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಇಡೀ ಕಾರಿಗೆ ವ್ಯಾಪಿಸಿದ ಬೆಂಕಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಂಜಾನೆಯಾದ್ದರಿಂದ ಅಷ್ಟಾಗಿ ದಾರಿಯಲ್ಲಿ ಯಾರೂ ಸಾಗುತ್ತಿರಲಿಲ್ಲ. ಹಾಗಾಗಿ ಸಹಾಯಕ್ಕೆ ಸ್ಥಳೀಯರು ಧಾವಿಸಿಲ್ಲ ಎನ್ನಲಾಗಿದೆ. ದಂಪತಿ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅರೆಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx