ಬೆಂಗಳೂರು: ಕನ್ನಡದಲ್ಲಿಯೂ ಕಳೆದ 11 ವರ್ಷಗಳಿಂದ ಈ ಶೋ ಮೂಡಿಬರುತ್ತಿದೆ. ಬಿಗ್ ಬಾಸ್ ಅಂದ್ರೆ ಕಿಚ್ಚ ಸುದೀಪ್ ಎಂದೇ ಜನ ನೋಡುತ್ತಿದ್ದಾರೆ. ಆದ್ರೆ ಕಿಚ್ಚ ಸುದೀಪ್ ಇದೀಗ ಇದು ನನ್ನ ಕೊನೆಯ ಬಿಗ್ ಬಾಸ್ ಶೋ ಎಂದು ಹೇಳಿಕೊಂಡಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ.
ಬಿಗ್ಬಾಸ್ ನಿರೂಪಣೆಯಿಂದ ಹಿಂದೆ ಸರಿಯಲು ಕಿಚ್ಚ ಮನಸ್ಸು ಮಾಡಿದ್ದಾರೆ. ಇದೇ ನನ್ನ ಕೊನೆಯ ಸೀಸನ್ ಎಂದು ಹೇಳಿದ್ದು, ಇದನ್ನು ಕೇಳಿದ ಬಿಗ್ಬಾಸ್ ಪ್ರೇಕ್ಷಕರಿಗೆ ಬಹಳ ಬೇಸರವಾಗಿದೆ. ಕಿಚ್ಚನ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು ಎಂಬ ಚರ್ಚೆಗಳು ಸಹ ಇದೀಗ ನಡೆಯುತ್ತಿವೆ.
ಬಿಗ್ಬಾಸ್ ಸೀಸನ್ 11ರ ಮೇಲೆ ನೀವು ತೋರಿದ ಸ್ಪಂದನೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ನೀವು ತೋರಿದ ಪ್ರೀತಿ ಮತ್ತು ಗೌರವ ಎಂಥದ್ದು ಎಂಬುದನ್ನು ಟಿಆರ್ಪಿ ನಂಬರ್ ಹೇಳುತ್ತಿದೆ. ಸುಮಾರು 11 ವರ್ಷಗಳ ಕಾಲ ಒಟ್ಟಿಗೆ ನಡೆದಿದ್ದೇನೆ.
ಇನ್ನು ಮುಂದೆ ನಾನು ಮಾಡಬೇಕಾಗಿರುವುದನ್ನು ಮಾಡುವ ಸಮಯ ಬಂದಿದೆ. ಬಿಗ್ಬಾಸ್ ನಿರೂಪಕನಾಗಿ ಇದು ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ಈ ನಿರ್ಧಾರವನ್ನು ಕಲರ್ಸ್ ಕನ್ನಡ ಮತ್ತು ಈ ಎಲ್ಲಾ ವರ್ಷಗಳಿಂದ ಬಿಗ್ಬಾಸ್ ಶೋ ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ ಮತ್ತು ನಾನು ಕೂಡ ಸಾಧ್ಯವಾದಷ್ಟು ನಿಮ್ಮೆಲ್ಲರನ್ನು ರಂಜಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಪ್ಪುಗೆ ಸದಾ ಹೀಗೆ ಇರಲಿ ಎಂದು ಕಿಚ್ಚ ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296