ಮಂಡ್ಯ: ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಅಭಿಷೇಕ್ ಗೌಡ ಬಂಧಿತ ಶಿಕ್ಷಕನಾಗಿದ್ದಾನೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ ಮಗುವಿದೆ ಎಂದು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ನವೆಂಬರ್ 23 ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲಾಗಿತ್ತು. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಆರೋಪಿಯು 25 ವರ್ಷ ವಯಸ್ಸಿನವನಾಗಿದ್ದು, ಆತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಅಪಹರಣ ಮತ್ತು ಅತ್ಯಾಚಾರದ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx