nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026
    Facebook Twitter Instagram
    ಟ್ರೆಂಡಿಂಗ್
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನ್ ಮಗನ್ನ ದಯಮಾಡಿ ಜೈಲಿಗೆ ಹಾಕಿ, ಇಲ್ಲಂದ್ರೆ ಸಾಯ್ಸಕ್ಕೆ ಪರ್ಮಿಷನ್ ಕೊಡಿ: ಹೆತ್ತ ತಾಯಿಯ ಸಂಕಟದ ಮಾತುಗಳು
    ತುರುವೇಕೆರೆ November 10, 2024

    ನನ್ ಮಗನ್ನ ದಯಮಾಡಿ ಜೈಲಿಗೆ ಹಾಕಿ, ಇಲ್ಲಂದ್ರೆ ಸಾಯ್ಸಕ್ಕೆ ಪರ್ಮಿಷನ್ ಕೊಡಿ: ಹೆತ್ತ ತಾಯಿಯ ಸಂಕಟದ ಮಾತುಗಳು

    By adminNovember 10, 2024No Comments2 Mins Read
    turuvekere

    ಸಾರ್ ನನ್ ಮಗ ಸರಿಯಿಲ್ಲ. ಗಾಂಜಾ ಹೊಡೀತಾನೆ, ಡ್ರಗ್ಸ್ ತಗೋತಾನೆ, ಸಿಕ್ಕ ಸಿಕ್ಕವರ ಮೇಲೆ ಹೊಡೆದಾಟಕ್ಕೆ ಹೋಗ್ತಾನೆ. ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತಾಡ್ತಾನೆ. ಕೀಟಲೆ ಮಾಡ್ತಾನೆ. ಜನರ ಕೈಲಿ ಒದೆ ತಿಂತಾನೆ. ಅದನ್ನು ನಾನು ನೋಡಕ್ಕೆ ಆಗಲ್ಲ. ಕೈ ಕಾಲು ಮುರಿದು ಹಾಕ್ತಾರೆ. ಜನಗಳು ನಮ್ ಮನೆ ಮುಂದೆ ಬಂದು ಗಲಾಟೆ ಮಾಡ್ತಾರೆ. ಮರ‍್ಯಾದೆ ಹೋಗ್ತಾ ಇದೆ. ದಯಮಾಡಿ ನನ್ ಮಗನ್ನ ಜೈಲಿಗೆ ಹಾಕಿ. ಇಲ್ಲಾಂದ್ರೆ ನನಗೆ ಅವನನ್ನು ಸಾಯಿಸಕ್ಕೆ ಪರ್ಮಿಷನ್ ಕೊಡಿ.  ಎಂದು ಮಹಿಳೆಯೊಬ್ಬರು ಅಂಗಲಾಚಿದ ಘಟನೆ ನಡೆದಿದೆ.

    ಹೌದು. ನಂಬಿದರೆ ನಂಬಿ.ಬಿಟ್ಟರೆ ಬಿಡಿ. ಇದು ತುರುವೇಕೆರೆ ಪಟ್ಟಣದಲ್ಲಿ ಸಣ್ಣ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿರುವ ರೇಣುಕಮ್ಮರ ನೋವು. ತಮ್ಮ 20 ವರ್ಷ ವಯೋಮಾನದ ಮಗ ಅಭಿ ಕೆಟ್ಟ ಸ್ನೇಹಿತರ ಸಹವಾಸಕ್ಕೆ ಬಿದ್ದು ಕಲಿಯಬಾರದ ಚಟಗಳನ್ನೆಲ್ಲಾ ಕಲಿತಿದ್ದಾನೆ. ಚಟಗಳಿಂದ ಮುಕ್ತಗೊಳಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದೇನೆ. ಆದರೂ ಪ್ರಯೋಜನವಾಗಿಲ್ಲ.  ಪಟ್ಟಣದಲ್ಲಿ ಗಾಂಜಾ ಸೇರಿದಂತೆ ಹಲವಾರು ಮಾದಕ ವಸ್ತುಗಳು ಮಾರಾಟವಾಗುತ್ತಿವೆ. ಇದು ಯುವಕರನ್ನು ಹಾಳು ಮಾಡುತ್ತಿದೆ. ನನ್ನ ಮಗನೂ ಇಂತಹ ಜಾಲಕ್ಕೆ ಬಿದ್ದು ತನ್ನ ಜೀವನವನ್ನು ಹಾಳು ಮಾಡಿಕೊಂಡಿದ್ದಾನೆ. ಹೀಗೇ ಪಟ್ಟಣದಲ್ಲಿ ಸಾಕಷ್ಟು ಯುವಕರಿದ್ದಾರೆ. ಇವರಿಗೆ ಮಾದಕ ವಸ್ತುಗಳನ್ನು ಸಪ್ಲೈ ಮಾಡುತ್ತಿರುವವರು ಯಾರು ಎಂಬುದನ್ನು ದಯಮಾಡಿ ಪತ್ತೆ ಹಚ್ಚಿ ಅಮಾಯಕರನ್ನು ಕಾಪಾಡಿ ಎಂದು ರೇಣುಕಮ್ಮ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.


    Provided by
    Provided by

    ಶನಿವಾರ ಮಧ್ಯಾಹ್ನ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಅಭಿ ಅಲ್ಲಿದ್ದ ಕೆಲವು ಬಾಲಕಿಯರನ್ನು ಚುಡಾಯಿಸಿದ್ದಾನೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಗಮನಿಸಿದ ಅಲ್ಲೇ ಇದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಭಿಯನ್ನು ಹಿಡಿದು ಚೆನ್ನಾಗಿ ಥಳಿಸಿ ಸ್ಥಳೀಯ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಈ ನಡುವೆ ಇದೇ ಅಭಿ ಕಳೆದ ಮೂರ‍್ನಾಲ್ಕು ದಿನಗಳ ಹಿಂದೆ ಪಟ್ಟಣದಲ್ಲಿ ಯುವತಿಯೋರ್ವಳಿಗೆ ಜೀವ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿತ್ತು. ಪೊಲೀಸರು ಅಭಿಯನ್ನು ಹುಡುಕುತ್ತಿದ್ದರು. ಈ ಮಧ್ಯೆ ಕಾಲೇಜಿನ ಕ್ರೀಡಾಂಗಣದಲ್ಲಿ ಮಾದಕ ವಸ್ತು ಸೇವಿಸಿದ್ದ ಅಭಿ ಕುಚೇಷ್ಠೆ ಮಾಡಿ ಜನರ ಕೈಗೆ ಸಿಕ್ಕಿ ಹಣ್ಣುಗಾಯಿ ನೀರುಗಾಯಿ ಆಗಿ ಪೋಲಿಸರ ಅತಿಥಿಯಾಗಿದ್ದ.

    ಅಭಿಯ ತಾಯಿ ರೇಣುಕಮ್ಮ ತನ್ನ ಮಗ ಮಾದಕ ವಸ್ತುಗಳಿಗೆ ದಾಸನಾಗಿದ್ದಾನೆ. ಮನೆಯಲ್ಲಿ ಕೊಡಬಾರದ ಕಿರುಕುಳ ಕೊಡ್ತಾ ಇದ್ದಾನೆ. ಬೈಕ್ ಮತ್ತು ಮೊಬೈಲ್ ಬೇಕು ಅಂದ. ಕೊಡಿಸಲ್ಲ ಅಂದರೆ ಎಲ್ಲಿ ಕಳ್ಳತನ ಮಾಡ್ತಾನೋ?. ಏನು ಸಮಸ್ಯೆ ಮಾಡಿಕೊಳ್ತೋನೋ ಅಂತ ಹೆದರಿ ಸಾಲ ಮಾಡಿ ಬೈಕ್ ಮತ್ತು ಮೊಬೈಲ್ ಕೊಡಿಸಿದೆ. ಆದರೆ ಈಗ ಈ ಸಂಕಟ ತಂದಿಟ್ಟಿದ್ದಾನೆ ಎಂದು ರೇಣುಕಮ್ಮ ಅಲವತ್ತುಕೊಂಡರು.

    ದಯಮಾಡಿ ನನ್ನ ಮಗನನ್ನು ಜೈಲಿಗೆ ಹಾಕಿಯಾದರೂ ಈ ದುಷ್ಚಟಗಳಿಂದ ದೂರ ಮಾಡಬೇಕು. ನನ್ನ ಮಗ ಹಾಳಾದ ರೀತಿಯಲ್ಲಿ ಇನ್ನೂ ಹಲವಾರು ಮಕ್ಕಳಿದ್ದಾರೆ. ಅವರನ್ನು ಈ ಪಾಪದ ಕೂಪದಿಂದ ಪಾರು ಮಾಡಬೇಕು ಎಂಬುದು ನನ್ನ ಆಸೆ. ಇಲ್ಲವೇ ನನ್ನ ಮಗನನ್ನು ಸಾಯಿಸಕ್ಕೆ ಪರ್ಮಿಷನ್ ಕೊಡಿ, ನಾನು ಅವನನ್ನು ಸಾಯಿಸಿ ನಾನೂ ಸಾಯ್ತೀನಿ ಎಂದು ಪೋಲಿಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಪೊಲೀಸ್ ಠಾಣೆಗೆ ತೆರಳಿದ್ದ ತಾಯಿ ರೇಣುಕಮ್ಮಳಿಗೆ ಧೈರ್ಯ ತುಂಬಿದ ಸಬ್ ಇನ್ಸ್ ಪೆಕ್ಟರ್ ಪಾಂಡು, ಅಭಿ ಕೆಟ್ಟ ಸ್ನೇಹಿತರ ಸಹವಾಸದಿಂದ ಹಾಳಾಗಿದ್ದಾನೆ. ಅವನನ್ನು ಸರಿದಾರಿಗೆ ತರುವ ಪ್ರಯತ್ನಕ್ಕೆ ತಾವು ಕೈ ಜೋಡಿಸುವುದಾಗಿ ಹೇಳಿದ್ದಾರೆ. ನಿಮ್ಹಾನ್ಸ್ ನಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಲು ತಾವು ನೆರವು ನೀಡುವುದಾಗಿ ರೇಣುಕಮ್ಮರಿಗೆ ಧೈರ್ಯ ತುಂಬಿದ್ದಾರೆ.  ಸದ್ಯ ತುರುವೇಕೆರೆ ಪೊಲೀಸರು ಅಭಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ಮಂಡ್ಯ: ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪವೊಂದು ಕೇಳಿಬಂದಿದೆ.…

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.