ಚಾಮರಾಜನಗರ: ಕೊವಿಡ್ ಭತ್ಯೆ ಮಂಜೂರು ಮಾಡುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಿರಿಯ ವೈದ್ಯರು ಎರಡನೇಯ ದಿನವಾದ ಇಂದು ಕೂಡ ಮುಷ್ಕರ ಮುಂದುವರಿಸಿದರು.
ಕಿರಿಯ ವೈದ್ಯರ ಒಕ್ಕೂಟದ ಆಶ್ರಯದಲ್ಲಿ ವೈದ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಭುವನೇಶ್ವರಿ ವೃತ್ತದ ಬಳಿ ಸೇರಿದರು. ಬಳಿಕ ಅಲ್ಲಿಂದ ಜಿಲ್ಲಾಸ್ಪತ್ರೆಗೆ ತೆರಳಿ ಪ್ರತಿಭಟನೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಬಳಿಕ ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೂ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಮನವಿ ಸಲ್ಲಿಸಿದರು.
ಕೋವಿಡ್ ಸಂದರ್ಭದಲ್ಲಿ ಕಿರಿಯ ವೈದ್ಯರು ರೋಗಿಗಳ ಆರೈಕೆ ಮಾಡಿದ್ದಾರೆ. ಸರ್ಕಾರವು ಈ ವರ್ಷದ ಮೇ ತಿಂಗಳಲ್ಲಿ ಕೋವಿಡ್ ಭತ್ಯೆ ನೀಡುವುದಾಗಿ ಘೋಷಿಸಿತ್ತು. ಆದರೆ, ಇದುವರೆಗೆ ನೀಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700