ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲೀಂ ರಾಜರು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈ ವಿರುದ್ದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಪ್ರಮೋದ್ ಮುತಾಲಿಕ್ ಸಾವಿರಾರು ವರ್ಷದಿಂದ ಮಠದಲ್ಲಿ ಪೂಜೆ ನಡೆಯುತ್ತಿದೆ. ಮುಸ್ಲೀಂ ವೋಟ್ ಬ್ಯಾಂಕ್ ಗಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಕೀರ್ತಿ ಗಳಿಸಲು ಇಂತಹ ಅಸಹ್ಯ ಹೇಳಿಕೆ ನೀಡಿದ್ದಾರೆ. ಚುನಾವಣೆ ಹೊತ್ತಲ್ಲಿ ಇಂತಹ ಹೇಳಿಕೆ ಬೇಕಿತ್ತಾ…? ಎಂದು ಪ್ರಶ್ನಿಸಿದರು.
ಮಿಥುನ್ ರೈ ತಮ್ಮ ಹೇಳಿಕೆಯನ್ನ ಹಿಂಪಡೆಯಬೇಕು. ಇಲ್ಲದಿದ್ದರೇ ಹಿಂದೂಗಳು ಮತ ಹಾಕಲ್ಲ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


