ಬೆಂಗಳೂರು: ಫ್ಯಾಟ್ ಸರ್ಜರಿಯ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅವರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಡೆದಿದೆ.
ಮಾಹಿತಿಗಳ ಪ್ರಕಾರ, ಶ್ವಾಸಕೋಶದಲ್ಲಿ ನೀರಿನಾಂಶ ಸೇರಿಕೊಂಡು ಅವರು ಸಾವನ್ನಪ್ಪಿದ್ದಾರೆನ್ನಲಾಗುತ್ತಿದೆ. ಇನ್ನೂ ವೈದ್ಯರ ನಿರ್ಲಕ್ಷ್ಯದಿಂದ ಮಗಳು ಸಾವನ್ನಪ್ಪಿರುವುದಾಗಿ ಚೇತನಾ ತಾಯಿ ಆರೋಪಿಸಿದ್ದಾರೆ.
ಪೋಷಕರ ಒಪ್ಪಿಗೆ ಇಲ್ಲದೆ ಸರ್ಜರಿ ಮಾಡಿದ್ದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಘಟನೆಯು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಲವಾರು ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಚೇತನ ರಾಜ್ ಅಭಿನಯಿಸಿದ್ದಾರೆ. . ‘ಗೀತಾ’, ‘ದೊರೆಸಾನಿ’ ಧಾರಾವಾಹಿ ಹಾಗೂ ಹಲವು ಚಿತ್ರಗಳಲ್ಲಿ ಚೇತನಾ ರಾಜ್ ಅಭಿನಯಿಸಿದ್ದಾರೆ.
ವರದಿ: ಮುರುಳಿಧರನ್ ಆರ್ ಹಿರಿಯೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5