ತಿಪಟೂರು: ಪ್ರಧಾನಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆ 19 ನೇ ಕಂತಿನ ಹಣವನ್ನು ನೇರ ರೈತರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮದ ನೇರ ವೀಕ್ಷಣೆ ಸಮಾರಂಭ ತಿಪಟೂರಿನಲ್ಲಿ ಫೆಬ್ರವರಿ 24ರಂದು ನಡೆಯಲಿದೆ, ರೈಲ್ವೆ ಸಚಿವ ಹಾಗೂ ಜಲಶಕ್ತಿ ಖಾತೆ ಸಚಿವ ವಿ.ಸೋಮಣ್ಣ ಈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ಕೊನೆ ಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಗೋವಿಂದೇಗೌಡ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೆ.ಷಡಕ್ಷರಿ ಭಾಗವಹಿಸವರು , ಈ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ಇದೇ ವೇಳೆ ಕೆವಿಕೆ ವತಿಯಿಂದ ಕೃಷಿ ಮತ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದು ಗೋವಿಂದೇಗೌಡ ಹೇಳಿದರು ಡಾ. ಶಿವಪ್ಪ ನಾಯಕ ಹಾಗೂ ಡಾ. ದರ್ಶನ್ ಉಪಸ್ಥಿತರಿದ್ದರು
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4