ಬೆಳಗಾವಿ : ಕಿತ್ತೂರು ಬಳಿ 1,000 ಎಕರೆ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ನಿರ್ಧರಿಸಲಾಗಿದ್ದು, ಇದರಿಂದ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಚನ್ನಮ್ಮನ್ನ ಕಿತ್ತೂರಿನ ಕೋಟೆ ಆವರಣದಲ್ಲಿ ಸೋಮವಾರ ಚನ್ನಮ್ಮನ ಕಿತ್ತೂರು ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು , ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 50 ಕೋಟಿ ಕೊಟ್ಟಿದ್ದರು, ನಾವು ಈಗ ಅದನ್ನು 115 ಕೋಟಿ ರೂ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ನಿಮ್ಮೆಲ್ಲರ ಆಶೀರ್ವಾದ, ಚನ್ನಮ್ಮ ಆಶೀರ್ವಾದದಿಂದ ಎರಡು ನೀರಾವರಿ ಯೋಜನೆಗೆ ಅನುಮತಿ ಪಡೆಯಬೇಕಿದೆ. ಕಳಸಾ ಬಂಡೂರಿ ಯೋಜನೆ ಅಂತಿಮ ಹಂತದಲ್ಲಿದೆ. ಅದಕ್ಕೂ ಒಪ್ಪಿಗೆ ಪಡೆದು ಆದಷ್ಟು ಬೇಗ ಕೆಲಸ ಮುಗಿಸುತ್ತೇವೆ ಎಂದರು. ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿ ಸಂಕಲ್ಪವನ್ನು ನಮ್ಮ ಸರ್ಕಾರ ಮಾಡಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


