ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ ಟಿಸಿ) ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ ಶೆಂಬಳ್ಳಿ ಕ್ರಾಸ್ ಸಮೀಪ ಗುರುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ.
ಔರಾದ್ ತಾಲ್ಲೂಕಿನ ಜೊನ್ನೆಕೇರಿ ಗ್ರಾಮದ ಯುವರಾಜ್ ಶರಣಪ್ಪಾ ಬಿರಾದಾರ (35) ಮೃತರು ಪತ್ನಿ ತಂದೆ- ತಾಯಿ, ಸಹೋದರರು, 2 ವರ್ಷದ ಪುತ್ರ ಹಾಗೂ ಬಂಧು ಮಿತ್ರರಿದ್ದಾರೆ
ಬೀದರ್ ನಿಂದ ಬೈಕ್ ಮೇಲೆ ಸ್ವಗ್ರಾಮಕ್ಕೆ ತೆರಳುತ್ತಿದ್ದರು ರಾಷ್ಟ್ರೀಯ ಹೆದ್ದಾರಿ –161(ಎ) ರಲ್ಲಿ ಔರಾದ್ ಕಡೆಯಿಂದೆ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಯುವರಾಜ ಅವರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಿದರು, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಸ್ಥಳಕ್ಕೆ ಸಂತಪೂರ ಪೊಲೀಸ್ ಠಾಣೆ ಪಿಎಸ್ ಐ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದರು.ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ ಎಂದು ತಿಳಿಸಿದ್ದಾರೆ
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————