nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » KLE ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ: ಕ್ಯಾನ್ಸರ್ ಬಗ್ಗೆ ಅರಿವಿನ ತುರ್ತು ಅಗತ್ಯತೆ ಇದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    ಜಿಲ್ಲಾ ಸುದ್ದಿ January 5, 2025

    KLE ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ: ಕ್ಯಾನ್ಸರ್ ಬಗ್ಗೆ ಅರಿವಿನ ತುರ್ತು ಅಗತ್ಯತೆ ಇದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    By adminJanuary 5, 2025No Comments2 Mins Read
    kle

    ಬೆಳಗಾವಿ: ಕ್ಯಾನ್ಸರ್ ರೋಗವು ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವುದು ಕಳವಳಕಾರಿ ಸಂಗತಿ. ಇದಕ್ಕೆ ಹಲವು ಕಾರಣಗಳಿದ್ದು, ನಮ್ಮ ಜೀವನ ಶೈಲಿ ಆರೋಗ್ಯದ ಮೇಲೆ ಬಹಳ ಪರಿಣಾಮ ಬೀರುತ್ತಿದೆ. ಹಾಗಾಗಿ, ಸದೃಢ ಆರೋಗ್ಯ ಮತ್ತು ಸೂಕ್ತ ಚಿಕಿತ್ಸೆಯ ಬಗ್ಗೆ ಜನರಲ್ಲಿ ಪರಿಣಮಕಾರಿಯಾಗಿ ಅರಿವು ಮೂಡಿಸುವ ತುರ್ತು ಅಗತ್ಯತೆ ಇದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

    ಕೆಎಲ್ ಇ ಡಾ‌‌.ಸಂಪತ್‌ ಕುಮಾರ ಶಿವಣಗಿ ನೂತನ ಕ್ಯಾನ್ಸರ್ ಆಸ್ಪತ್ರೆಯನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, “ವಿಶ್ವದ ಜನಸಂಖ್ಯೆಯಲ್ಲಿ ಪ್ರತಿ ವರ್ಷ 2 ಕೋಟಿ ಜನ ಕ್ಯಾನ್ಸರ್‌ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇದರಲ್ಲಿ 97 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಭಾರತದಲ್ಲಿ ಕೂಡ ಕ್ಯಾನ್ಸರ್‌ ಆಘಾತಕಾರಿಯಾಗಿ ಹರಡುತ್ತಿದೆ. ಪ್ರತಿ 1 ಲಕ್ಷ ಜನರಲ್ಲಿ 100 ಜನರಿಗೆ ಕ್ಯಾನ್ಸರ್‌ ಬರುತ್ತಿದೆ. 2025ರಲ್ಲಿ ಕ್ಯಾನ್ಸರ್‌ ರೋಗ ಹರಡುವ ದರವು ಶೇ.13ರಷ್ಟು ಹೆಚ್ಚಲಿದೆ ಎಂದು ಐಸಿಎಂಆರ್‌ ಸಂಶೋಧನೆಯಿಂದ ಗೊತ್ತಾಗಿದೆ” ಎಂದರು.

    ಕ್ಯಾನ್ಸರ್ ರೋಗಿಗಳ ದೈಹಿಕ ಮತ್ತು ಮಾನಸಿಕ ಅಗತ್ಯಗಳನ್ನು ಪರಿಹರಿಸುವುದು ಮತ್ತು ಸಮಗ್ರ ಆರೈಕೆ ಮಾಡುವುದು ಆರೋಗ್ಯ ವೃತ್ತಿಪರರ ಪ್ರಮುಖ ಕರ್ತವ್ಯವಾಗಿದೆ. ವೈದ್ಯರು ಹೇಳುವ ಪ್ರತಿಯೊಂದು ಸಹಾನುಭೂತಿ ಮತ್ತು ವಿಶ್ವಾಸದ ಮಾತುಗಳು ರೋಗಿಯ ಜೀವನವನ್ನು ಉತ್ತಮವಾಗಿ ಬದಲಾಯಿಸುವ ಶಕ್ತಿಯನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ” ಕರೆ ನೀಡಿದರು

    ವೈದ್ಯಕೀಯ ವೃತ್ತಿಗೆ ತನ್ನದೇ ಆದ ಘನತೆ ಮತ್ತು ಜವಾಬ್ದಾರಿ ಇದೆ. ವೃತ್ತಿಪರ ವೈದ್ಯರು ನಿಮ್ಮಲ್ಲಿಗೆ ಬರುವ ರೋಗಿಗಳಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು. ಯಾವುದೇ ರೋಗಕ್ಕೆ ಪ್ರಾಥಮಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆಯುವಂತೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿ ವೈದ್ಯರ ಮೇಲಿದೆ. ಇನ್ನು ಕೇಂದ್ರ ಸರ್ಕಾರ ಎಲ್ಲ ವರ್ಗದ ಜನರಿಗೆ ಸಮರ್ಪಕ ಚಿಕಿತ್ಸೆ ದೊರೆಯಬೇಕು ಎಂಬ ಉದ್ದೇಶದಿಂದ ಆಯುಷ್ ಮಾನ್ ಸೇರಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

    ತಪ್ಪು ಆಹಾರ ಪದ್ಧತಿಯಿಂದ ರೋಗಗಳಿಗೆ ತುತ್ತಾಗುತ್ತಿದ್ದೇವೆ: ಕೇಂದ್ರ ಸಚಿವ ಪ್ರಲ್ಹಾದ್​

    ಜೋಶಿ ಮಾತನಾಡಿ, ರಾಷ್ಟ್ರಪತಿ‌ ದ್ರೌಪದಿ ಅವರು ಆದಿವಾಸಿಗಳು ಮತ್ತು ಹಿಂದುಳಿದವರ ಪರ ಸಾಕಷ್ಟು ಹೋರಾಡಿದ್ದಾರೆ. ಒಡಿಶಾದಲ್ಲಿ ಅತ್ಯುತ್ತಮ ಶಾಸಕಿ ಪ್ರಶಸ್ತಿ ಪಡೆದಿದ್ದರು

    ಆದಿವಾಸಿ ಸಮುದಾಯದ ಪ್ರಥಮ ಮಹಿಳೆ ರಾಷ್ಟ್ರಪತಿ ಆಗಿದ್ದು ನಮ್ಮೆಲ್ಲರ ಹೆಮ್ಮೆ. ಇವತ್ತಿನ ಜೀವನಶೈಲಿ, ತಪ್ಪು ಆಹಾರ ಪದ್ಧತಿಯಿಂದ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದೇವೆ.‌ ಸರ್ವಜ್ಞ ಅವರು ತಮ್ಮ ವಚನದ ಮೂಲಕ ಆಹಾರ ಪದ್ಧತಿ ಬಗ್ಗೆ ಆಗಲೇ ಎಚ್ಚರಿಸಿದ್ದರು.‌ ಈಗ 12.8ರಷ್ಟು ಜನಸಂಖ್ಯೆ ಕ್ಯಾನ್ಸರ್ ನಿಂದ ಬಳಲುತ್ತಿದೆ. ರೋಗ ಕಂಡು ಹಿಡಿದು, ಪ್ರಾಥಮಿಕ ಹಂತದಲ್ಲಿ ರೋಗ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ, ಕ್ಯಾನ್ಸರ್ ಗುಣಪಡಿಸಬಹುದು ಎಂದರು.

    ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನ ಆರ್ಥಿಕ ರಾಜಧಾನಿಯಾಗಿ ಹೊರ ಹೊಮ್ಮುತ್ತಿದೆ. ವಿಶ್ವದ 5ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಭವಿಷ್ಯದಲ್ಲಿ 3ನೇ ದೇಶವಾಗಲಿದೆ. ಅಲ್ಲದೇ ಆರೋಗ್ಯವಂತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಕೆಎಲ್ಇ ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ಈ ಭಾಗದಲ್ಲಿ ಬಹುದೊಡ್ಡ ಕೊಡುಗೆ ನೀಡಲಿದೆ” ಎಂದು ಹೇಳಿದರು.

    ಪ್ರಾಸ್ತಾವಿಕವಾಗಿ ಕೆಎಲ್ ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಮಾತನಾಡಿದರು. ದಾನಿಗಳಾದ ಡಾ.ಸಂಪತ್ ಕುಮಾರ ಶಿವಣಗಿ ಹಾಗೂ ಅವರ ಧರ್ಮಪತ್ನಿ ಡಾ.ಉದಯಾ ಶಿವಣಗಿ ಸೇರಿ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಭಾಗವಹಿಸಿದ್ದರು. ಕೆಎಲ್ ಇ ಅಧ್ಯಕ್ಷ ಮಹಾಂತೇಶ ಕೌಜಲಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.