ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.
ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್ ಗೆ ಸಾಧ್ಯವಾಗಿದೆ ಎಂದು ಹೇಳಲಾಗಿದೆ.
ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು. ಕಳೆದ ವರ್ಷ ಜೂನ್ 28 ರಂದು 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗಿತ್ತು. ಆನಂತರ ದೈನಂದಿನ ಸರಾಸರಿ ಸಂಗ್ರಹ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡಿತ್ತು. ಈ ಮೂಲಕ, ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮುಂದುವರಿಸಿದೆ ಎಂದು ಕೆಎಂಎಫ್ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————