nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರು ಸಬಲರಾಗಲು ಕೆ.ಎನ್.ರಾಜಣ್ಣ ಸಾಕಷ್ಟು ಆರ್ಥಿಕ ನೆರವು ನೀಡಿದ್ದಾರೆ | ರೂಪ ಶಶಿಧರ್
    ಮಧುಗಿರಿ March 10, 2023

    ಮಹಿಳೆಯರು ಸಬಲರಾಗಲು ಕೆ.ಎನ್.ರಾಜಣ್ಣ ಸಾಕಷ್ಟು ಆರ್ಥಿಕ ನೆರವು ನೀಡಿದ್ದಾರೆ | ರೂಪ ಶಶಿಧರ್

    By adminMarch 10, 2023No Comments3 Mins Read
    mahiladina

    ಮಧುಗಿರಿ: ಕ್ಷೇತ್ರದಲ್ಲಿ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಸಾಕಷ್ಟು ಆರ್ಥಿಕ ನೆರವು ನೀಡಿದ್ದಾರೆ ಎಂದು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪ ಶಶಿಧರ್  ತಿಳಿಸಿದರು.

    ಪಟ್ಟಣದ ಎಪಿಎಂಸಿ ಹಿಂಭಾಗ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ತಾಲೂಕು ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬೂತ್ ಮಟ್ಟದ ಮಹಿಳಾ ಮುಖಂಡರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಅವರಿಗೆ ಆರ್ಥಿಕ ನೆರವು ನೀಡುವುದು ಅತ್ಯಗತ್ಯ, ಈ ನಿಟ್ಟಿನಲ್ಲಿ ಜಿಲ್ಲಾ ಬ್ಯಾಂಕ್ ನ ಅಧ್ಯಕ್ಷರಾಗಿರುವ ಕೆ.ಎನ್.ರಾಜಣ್ಣನವರು ಅನೇಕ ಸವಲತ್ತುಗಳನ್ನು ಒದಗಿಸಿ ಅವರಿಗೆ ಸ್ವಾಭಿಮಾನದಿಂದ ಬದುಕಲು ಅನುವು ಮಾಡಿಕೊಟ್ಟಿದ್ದಾರೆ ಎಂದರು.

    ಕಾಂಗ್ರೆಸ್ ಈ ಬಾರಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ,  ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ಹಣ ನೀಡಲಾಗುವುದರ ಜೊತೆ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಹಾಗೂ ಪ್ರತಿಯೊಬ್ಬರಿಗೂ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುವುದು ಎಂದರು.

    ಬಿಜೆಪಿ ಸರ್ಕಾರ ಬಡವರ ರಕ್ತ ಹೀರುತ್ತಿದೆ. ದಿನನಿತ್ಯ ಬಳಕೆಗಳ ಬೆಲೆ ಏರಿಕೆಯಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.  ಇದರಿಂದ ಬೇಸತ್ತಿರುವ ರಾಜ್ಯದ ಜನರು ಈ ಬಾರಿ ಕಾಂಗ್ರೆಸ್ ಗೆ ಮತ ನೀಡಲು ಮುಂದಾಗಿದ್ದು, ಈ ಬಾರಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ ಎಂದರು.

    ಡಿಸಿಸಿ ಬ್ಯಾಂಕ್ ಅಧ್ಯಕ್ಷ, ರಾಜ್ಯ ಕಾಂಗ್ರೇಸ್ ಪಕ್ಷದ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮತನಾಡಿ, ಬಡವರ ಪರವಾಗಿ ಯಾವುದಾದರೂ ಒಂದು ಪಕ್ಷ ಕೆಲಸ ಮಾಡುತ್ತೆ ಎಂದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ, ಇತಿಹಾಸ ಪುಟ ತೆರೆದು ನೋಡಿದರೆ ಪ್ರತಿ ಗ್ರಾಮೀಣ ಭಾಗದಲ್ಲೂ ಅಭಿವೃದ್ಧಿ ಮಾಡಿರುವುದು ಹಾಗೂ ದೀನ ದಲಿತರ ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಧ್ವನಿಯಾಗಿ ಕೆಲಸ ಮಾಡಿರುವುದು  ಕಾಂಗ್ರೆಸ್ ಪಕ್ಷ ಮಾತ್ರ ಎಂದರು.

    ನಾನು ಶಾಸಕನಾಗಿದ್ದ ಸಮಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಕೊಂಡು ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಿದ್ದೆ. ಆದರೆ ಕಳೆದ 5 ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಕ್ಷೇತ್ರ ಹಿಂದುಳಿದಿದೆ. ಮುಂದೆ ನಾನು ಶಾಸಕನಾಗಿ ಆಯ್ಕೆಯಾದರೆ ಮಧುಗಿರಿಯನ್ನು ಜಿಲ್ಲೆಯನ್ನಾಗಿಸಿ ಮಧುಗಿರಿ ಬೆಟ್ಟಕ್ಕೆ ರೋಪ್ ವೇ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ತಾಲೂಕಿನ ಮಹಿಳೆಯರು ಬೇರೆ ಕಡೆ ಕೆಲಸ ಮಾಡಲು ಹೋಗುತ್ತಿದ್ದು ಅವರಿಗೆ ಅನುಕೂಲವಾಗುವಂತೆ ಮಧುಗಿರಿಯಲ್ಲಿಯೇ ಕೈಗಾರಿಕೆ ಹಾಗೂ ಗಾರ್ಮೆಂಟ್ ಸ್ಥಾಪಿಸಲಾಗುವುದು ಎಂದ ಅವರು ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷದ ವರೆಗೂ ಬಡ್ಡಿ ರಹಿತವಾಗಿ ಸಾಲ ನೀಡಲಾಗುವುದು ಎಂದರು.

    ಕಾಂಗ್ರೆಸ್ ಈ ಬಾರಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ,  ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ಹಣ ನೀಡಲಾಗುವುದು, ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಹಾಗೂ ಪ್ರತಿಯೊಬ್ಬರಿಗೂ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುವುದು ಎಂದರು.

    ಭ್ರಷ್ಟಾಚಾರದಿಂದ ತುಂಬಿರುವ ಬಿಜೆಪಿ ಸರ್ಕಾರ ಈ ಬಾರಿ ಅಧಿಕಾರದಿಂದ ದೂರ ಇರುವುದು ಖಚಿತ, ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಸರ್ಕಾರ ಬರಬೇಕೆಂದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ನೀಡಿ ಗೆಲ್ಲಿಸಿ ಎಂದು ಕರೆ ನೀಡಿದರು.

    ಕಾಂಗ್ರೆಸ್ ಪಕ್ಷದ ಸಹಕಾರದಿಂದ ಮುಖ್ಯಮಂತ್ರಿಯಾದ ಕುಮಾರಸ್ವಾಮಿಯವರು ಉಪಕಾರ ಸ್ಮರಣೆ ಇಲ್ಲದೆ ಕಾಂಗ್ರೆಸ್ ಪಕ್ಷವನ್ನು ಮುಗಿಸುತ್ತೇನೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಇದಕ್ಕೆ ತಕ್ಕ ಉತ್ತರವನ್ನು ಜನರೇ ನೀಡಲಿದ್ದು, ಜನರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಮನವಿ ಮಾಡಿದ ಅವರು, ಈ ಬಾರಿಯ ಚುನಾವಣೆ ನನ್ನ ಕಡೆಯ ಚುನಾವಣೆಯಾಗಿದ್ದು, ನಿಮ್ಮ ಆಶೀರ್ವಾದ ಬಯಸಿದ್ದೇನೆ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮನಗೊಂಡು ನಿಮ್ಮ ಮತ ನೀಡಬೇಕು ಎಂದು ತಿಳಿಸಿದರು.

    ಕೆ.ಎನ್.ರಾಜಣ್ಣ ಅವರ ಅವಧಿಯಲ್ಲಿ ಕ್ಷೇತ್ರ ಬಹಳಷ್ಟು ಅಭಿವೃದ್ಧಿ ಹೊಂದಿದೆ, ಮಹಿಳೆಯರಿಗೆ ಹೆಚ್ಚಿನ ಗೌರವ ನೀಡುತ್ತಿರುವ ಕೆ.ಎನ್.ರಾಜಣ್ಣ ಅವರು ಮುಂದಿನ ದಿನಗಳಲ್ಲಿ ಶಾಸಕರಾಗಿ ಹಾಗೂ ಸಚಿವರಾಗಿ ಆಯ್ಕೆಯಾಗಲೆಂದು ಬಯಸುತ್ತೇನೆ. ನಾನು ಮಧುಗಿರಿಯ ಸೊಸೆಯಾಗಿದ್ದು, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ನೀಡಿದರೆ ನನಗೆ ಅರಿಶಿನ ಕುಂಕುಮ ನೀಡಿದಂತೆ ಎಂದು ರೂಪ ಶಶಿಧರ್ ಹೇಳಿದರು.

    ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಾಂತಲಾ ರಾಜಣ್ಣ, ಜಿ.ಜೆ.ರಾಜಣ್ಣ, ಮಂಜುಳಾ ಅಭಿನಾರಾಯಣ ರೆಡ್ಡಿ, ನಗರತ್ನಮ್ಮ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ರಾಜಣ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಇಂದಿರಾ ದೇನಾ ನಾಯ್ಕ್, ಮಾಜಿ ಸದಸ್ಯ ಸುವರ್ಣಮ್ಮ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗೇಶ್ ಬಾಬು,  ಪುರಸಭೆ ಉಪಾಧ್ಯಕ್ಷ ರಾಧಿಕಾ ಆನಂದ ಕೃಷ್ಣ, ಕೆಪಿಸಿಸಿ ಸದಸ್ಯರಾದ ಮಲ್ಲಿಕಾರ್ಜುನಯ್ಯ, ಡಾ.ನಾಗಲಕ್ಷ್ಮಿ, ಅನುಸೂಯಮ್ಮ, ಚಂದ್ರಮ್ಮ, ಪ್ರಮೀಳಾ, ಆಶಾ, ಸರಸ್ವತಿ, ಜಯಲಕ್ಷ್ಮಮ್ಮ, ಅರುಣಾ, ಭಾಗ್ಯಮ್ಮ, ಜಯಮ್ಮ, ವೀಣಾ, ಸಾವಿತ್ರಿ, ನಾಗರತ್ನಮ್ಮ, ಪಾರ್ವತಮ್ಮ, ಲೀಲಾ, ವಿದ್ಯಾರಾಣಿ, ಪುಷ್ಪಾ ಹಾಗೂ ಮುಂತಾದವರು ಇದ್ದರು.

    ವರದಿ: ಆಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    ಔರಾದ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ತಕ್ಷಣವೇ ಬಂದ್ ಮಾಡಬೇಕು ಮತ್ತು ಇದರಲ್ಲಿ ತೊಡಗಿರುವವರ…

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.