ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. 2024ರಲ್ಲಿ ರಕ್ಷಾಬಂಧನವನ್ನು ಸೋಮವಾರ, ಆಗಸ್ಟ್ 19ರಂದು ಆಚರಿಸಲಾಗುವುದು. ಈ ದಿನ ಸಹೋದರಿಯರು ತಮ್ಮ ಸಹೋದರರ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದವನ್ನೂ ನೀಡುತ್ತಾರೆ.
ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ರಕ್ಷಾಬಂಧನದಿಂದ ಸಹೋದರ–ಸಹೋದರಿಯರ ನಡುವೆ ಪ್ರೀತಿ ಹೆಚ್ಚಾಗುವುದರೊಂದಿಗೆ ಅವರ ನಡುವೆ ಇರುವ ಕೊಡು–ಕೊಳ್ಳುವ ಲೆಕ್ಕಾಚಾರ ಕಡಿಮೆಯಾಗುತ್ತದೆ. ಈ ಹಬ್ಬವು ಇಬ್ಬರಿಗೂ ಈಶ್ವರನತ್ತ ಪ್ರಯಾಣಿಸುವ ಅವಕಾಶ ಒದಗಿಸುತ್ತದೆ.
ಇತಿಹಾಸದ ಪುಟಗಳಲ್ಲಿ ರಕ್ಷಾಬಂಧನ:
1. ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆ ದಿನ ಶ್ರಾವಣ ಹುಣ್ಣಿಮೆ ಇತ್ತು.
2. ಇಂದ್ರ ಮತ್ತು ದೈತ್ಯರ ನಡುವೆ 12 ವರ್ಷಗಳಿಂದ ಘೋರ ಯುದ್ಧ ನಡೆದಿತ್ತು. ದೈತ್ಯರು ಗೆಲ್ಲುತ್ತಿದ್ದರು, ಇಂದ್ರನ ಶಕ್ತಿ ಕುಸಿಯುತ್ತಿತ್ತು. ಇಂದ್ರನು ಯುದ್ಧದಿಂದ ಹಿಂದೆ ಸರಿದು ತನ್ನ ಜೀವ ಉಳಿಸಿಕೊಳ್ಳುವ ವಿಚಾರ ಮಾಡುತ್ತಿದ್ದನು. ಇದನ್ನು ನೋಡಿದ ಇಂದ್ರಾಣಿಯು ಗುರು ಬೃಹಸ್ಪತಿಗೆ ಶರಣಾದಳು. ಗುರುಗಳು ಇಂದ್ರಾಣಿಯನ್ನು ಉದ್ದೇಶಿಸಿ, “ನೀನು ನಿನ್ನ ಪಾತಿವ್ರತ್ಯದ ಬಲದ ಮೇಲೆ ಇಂದ್ರನು ವಿಜಯಿಯಾಗಿ ಸುರಕ್ಷಿತನಾಗಿ ಬರಲಿ ಎಂಬ ಸಂಕಲ್ಪ ಮಾಡಿ, ಇಂದ್ರನ ಬಲಗೈಯ ಮಣಿಕಟ್ಟಿಗೆ ಒಂದು ದಾರ ಕಟ್ಟಿದರೆ ಇಂದ್ರನು ಈ ಯುದ್ಧವನ್ನು ಖಂಡಿತವಾಗಿಯೂ ಗೆಲ್ಲುವನು” ಎಂದು ಹೇಳಿದರು. ಇಂದ್ರಣಿಯು ಇದೇ ರೀತಿ ಮಾಡಿದಳು ಮತ್ತು ಇಂದ್ರನು ದೈತ್ಯರ ಮೇಲೆ ಜಯ ಸಾಧಿಸಿದನು.
3. ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು ಇತಿಹಾಸಕಾಲದಿಂದ ಪ್ರಾರಂಭವಾಯಿತು.
ಪ್ರಾಚೀನ ಕಾಲದ ರಾಖಿ:
ಅಕ್ಕಿ, ಬಂಗಾರ ಮತ್ತು ಬಿಳಿಸಾಸಿವೆಗಳನ್ನು ಒಂದುಗೂಡಿಸಿ ಗಂಟು ಕಟ್ಟಿದರೆ ರಕ್ಷಾ ರ‍್ಥಾತ್ ರಾಖಿಯು ತಯಾರಾಗುತ್ತದೆ. ಇದನ್ನು ರೇಶ್ಮೆಯ ದಾರದಿಂದ ಕಟ್ಟುತ್ತಿದ್ದರು.
ರಾಖಿ ಕಟ್ಟುವುದರ ಹಿಂದಿರುವ ಉದ್ದೇಶ:
ಸಹೋದರ–ಸಹೋದರಿಯರ ನಡುವಿನ ಕೊಡ–ಕೊಳ್ಳುವಿಕೆಯ ಲೆಕ್ಕಾಚಾರ ಕಡಿಮೆ ಮಾಡಲು ಸಹೋದರ–ಸಹೋದರಿಯರ ನಡುವೆ ಸಾಧಾರಣ 30% ಕೊಡು–ಕೊಳ್ಳುವಿಕೆಯ ಲೆಕ್ಕವಿರುತ್ತದೆ. ರಕ್ಷಾಬಂಧನದಂತಹ ಹಬ್ಬಗಳನ್ನು ಆಚರಿಸುವುದರಿಂದ ಅವರು ಸ್ಥೂಲ ಬಂಧನದಲ್ಲಿ ಸಿಲುಕಿದಂತೆ ಕಂಡರೂ ಸೂಕ್ಷ್ಮ ಸ್ತರದಲ್ಲಿ ಅವರ ನಡುವೆ ಇರುವ ಕೊಡ–ಕೊಳ್ಳುವ ಲೆಕ್ಕಾಚಾರ ಕಡಿಮೆಯಾಗುತ್ತದೆ.
ಇವನ್ನು ಮಾಡಿ:
• ಸಹೋದರನು ಸಹೋದರಿಯ ಮನೆಗೆ ಹೋಗಬೇಕು.
• ಸಹೋದರಿಯು ಸಹೋದರನ ಆರತಿ ಬೆಳಗಿ, ನಿರಪೇಕ್ಷವಾಗಿ ರಾಖಿ ಕಟ್ಟಬೇಕು
• ಸಹೋದರಿಯು ಸಹೋದರನಿಗೆ ನಮಸ್ಕರಿಸಿ ಆಶೀರ್ವಾದ ಪಡೆಯಬೇಕು
ಈ ದಿನವು ಸಹೋದರ–ಸಹೋದರಿಯರ ನಡುವಿನ ಕೊಡು-ಕೊಳ್ಳುವಿಕೆಯ ಲೆಕ್ಕಾಚಾರ ಕಡಿಮೆ ಮಾಡಲು ಪೂರಕವಾಗಿರುತ್ತದೆ. ಸಹೋದರಿಯು ನಿಸ್ವರ‍್ಥವಾಗಿ ರಾಖಿಯನ್ನು ಕಟ್ಟಿದರೆ ಈ ಲೆಕ್ಕಾಚಾರ ಇನ್ನಷ್ಟು ವೇಗವಾಗಿ ಕಡಿಮೆಯಾಗುತ್ತದೆ.
• ಸಹೋದರನು ಸಹೋದರಿಗೆ ಸಾತ್ತ್ವಿಕ ಉಡುಗೊರೆಯನ್ನು ನೀಡಬೇಕು.
ರಕ್ಷಾಬಂಧನದಂದು ರಾಖಿ ಕಟ್ಟಿಸಿಕೊಂಡು ಸಹೋದರನು ಸಹೋದರಿಗೆ ಏನಾದರೂ ಉಡುಗೊರೆ ನೀಡುತ್ತಾನೆ. ಇದರಿಂದ ಇಬ್ಬರಿಗೂ ಪರಸ್ಪರರ ನೆನಪಾಗುತ್ತದೆ. ಸಹೋದರಿಯ ಪ್ರೀತಿಗೆ ಬೆಲೆಕಟ್ಟಲು ಸಾಧ್ಯವಿಲ್ಲ ಆದರೆ ಪ್ರೀತಿಯ ಸಂಕೇತವೆಂದು ಉಡುಗೊರೆ ನೀಡಿ ಸ್ವಲ್ಪ ಮಟ್ಟಿಗೆ ಸಹೋದರಿಗೆ ಆನಂದ ನೀಡಬಹುದು. ಉಡುಗೊರೆ ಕೊಡುವಾಗ, ಸಹೋದರನ ಮನಸ್ಸಿನಲ್ಲಿರುವ ಈಶ್ವರನ ಬಗ್ಗೆ ಇರುವ ಭಾವವು ಸಹೋದರಿಯ ಮೇಲೆಯೂ ಪರಿಣಾಮ ಬೀರುತ್ತದೆ. ಆದುದರಿಂದ ಸಹೋದರಿಯು ಉಡುಗೊರೆಯನ್ನು ಕೇಳಿ ಪಡೆದುಕೊಳ್ಳದೆ, ಸಹೋದರನು ಸ್ವೇಚ್ಛೆಯಿಂದ ನೀಡಿರುವುದನ್ನು ಸ್ವೀಕರಿಸಿದರೆ ಒಳ್ಳೆಯದಾಗುತ್ತದೆ.
ಸಾತ್ತ್ವಿಕ ವಸ್ತುಗಳಿಂದ ಜೀವದ ಮೇಲೆ ವ್ಯಾವಹಾರಿಕ ಪರಿಣಾಮವಾಗುವುದಿಲ್ಲ. ಸಾತ್ತ್ವಿಕ ವಸ್ತುಗಳು ಕೊಡುವ ಜೀವಕ್ಕೆ 20% ಮತ್ತು ಸ್ವೀಕರಿಸುವ ಜೀವಕ್ಕೆ 18% ಲಾಭವಾಗುತ್ತದೆ. ಸಾತ್ತ್ವಿಕ ಕೃತಿಗಳಿಂದ ಕೊಡು–ಕೊಳ್ಳುವ ಲೆಕ್ಕ ಕಡಿಮೆಯಾಗಿ, ಹೊಸ ಲೆಕ್ಕಾಚಾರ ನಿರ್ಮಾಣವಾಗುವುದಿಲ್ಲ.
• ಪ್ರಾರ್ಥನೆ ಮಾಡಿ
ಏನ ಬದ್ಧೋ ಬಲೀ ರಾಜಾ ದಾನವೇಂದ್ರೋ ಮಹಾಬಲಃ|
ತೇನ ತ್ವಾಮಪಿ ಬಧ್ನಾಮಿ ರಕ್ಷೇ ಮಾ ಚಲ ಮಾ ಚಲ||
ಅರ್ಥ: ಮಹಾಬಲಿ ಮತ್ತು ದಾನವೇಂದ್ರನಾದ ಬಲಿರಾಜನು ಯಾವುದರಿಂದ ಬದ್ಧನಾದನೋ, ಆ ರಾಖಿಯಿಂದ ನಾನು ನಿನ್ನನ್ನೂ ಕಟ್ಟುತ್ತೇನೆ. ಎಲೈ ರಾಖಿಯೇ, ನೀನು ವಿಚಲಿತಳಾಗಬೇಡ.
ಸಹೋದರಿಯು ಸಹೋದರನ ಕಲ್ಯಾಣಕ್ಕಾಗಿ ಮತ್ತು ಸಹೋದರನು ಸಹೋದರಿಯ ರಕ್ಷಣೆಗಾಗಿ ಪ್ರಾರ್ಥನೆಯನ್ನು ಮಾಡುವುದರೊಂದಿಗೆ ಇಬ್ಬರೂ ‘ರಾಷ್ಟ್ರ ಮತ್ತು ರಕ್ಷಣೆಗಾಗಿ ನಮ್ಮಿಂದ ಪ್ರಯತ್ನವಾಗಲಿ’, ಎಂದು ಈಶ್ವರನಲ್ಲಿ ಪ್ರಾರ್ಥನೆಯನ್ನು ಮಾಡಬೇಕು.
ಇವನ್ನು ಮಾಡಬೇಡಿ
• ಸಹೋದರನಿಗೆ ಅಸಾತ್ತ್ವಿಕ ಅಥವಾ ದೇವತೆಗಳ ಚಿತ್ರವಿರುವ ರಾಖಿ ಕಟ್ಟಬೇಡಿ.
ಇತ್ತೀಚೆಗೆ ರಾಖಿಯ ಮೇಲೆ ಓಂ ಅಥವಾ ದೇವತೆಗಳ ಚಿತ್ರಗಳಿರುತ್ತವೆ. ರಾಖಿಯನ್ನು ಉಪಯೋಗಿಸಿದ ನಂತರ ಅದು ಆಚೀಚೆ ಬಿದ್ದು ದೇವತೆಗಳ ಅಥವಾ ಪ್ರತೀಕಗಳ ವಿಡಂಬನೆಯಾಗುತ್ತದೆ. ಇದರಿಂದ ಪಾಪ ತಗಲುತ್ತದೆ. ಇದನ್ನು ತಡೆಗಟ್ಟಲು ರಾಖಿಯನ್ನು ನೀರಿನಲ್ಲಿ ವಿಸರ್ಜಿಬೇಕು. ಅದೇ ರೀತಿ ಅಸಾತ್ತ್ವಿಕ ನಕ್ಷೆಯಿರುವ ರಾಖಿಗಳನ್ನೂ ಉಪಯೋಗಿಸಬೇಡಿ.
• ಸಹೋದರಿಯು ‘ತನಗೆ ಇದು ಬೇಕು, ಅದು ಕೊಡಿಸಬೇಕು’ ಎಂಬ ಅಪೇಕ್ಷೆ ಇಟ್ಟುಕೊಳ್ಳಬಾರದು
ಇತ್ತೀಚೆಗೆ ಸಹೋದರಿಯರು ರಾಖಿ ಕಟ್ಟಿಸಿಕೊಂಡ ಮೇಲೆ ಇದನ್ನೇ ಕೊಡಬೇಕು ಎಂದು ಮೊದಲೇ ಸಹೋದರನಿಗೆ ತಿಳಿಸಿರುತ್ತಾರೆ. ಈ ರೀತಿ ಸಹೋದರಿಯು ತನ್ನ ಸಹೋದರನಿಂದ ಯಾವುದಾದರೊಂದು ವಸ್ತುವನ್ನು ಪಡೆಯುವ ಅಪೇಕ್ಷೆಯನ್ನು ಇಟ್ಟುಕೊಂಡರೆ, ಆ ದಿನ ಪ್ರಾಪ್ತವಾಗುವ ಆಧ್ಯಾತ್ಮಿಕ ಲಾಭದಿಂದ ವಂಚಿತಳಾಗುತ್ತಾಳೆ. ಮಾತ್ರವಲ್ಲ, ಅಪೇಕ್ಷೆ ಇಟ್ಟುಕೊಂಡು ವಸ್ತು ಪಡೆದರೆ ಅದರಿಂದ 3 ಪಟ್ಟು ಹೆಚ್ಚು ಕೊಡ–ಕೊಳ್ಳುವ ಲೆಕ್ಕ ನಿರ್ಮಾಣವಾಗುತ್ತದೆ. ಈ ದಿನದಂದು ವಾತಾವರಣದಲ್ಲಿರುವ ಪ್ರೇಮ ಮತ್ತು ಆನಂದದ ಲಹರಿಗಳನ್ನು ಅನುಭವಿಸಲು ಆ ಅಪೇಕ್ಷೆ ಅಡ್ಡ ಬರುತ್ತದೆ. ಆಧ್ಯಾತ್ಮಿಕ ದೃಷ್ಟಿಯಲ್ಲಿ ಕೊಡುಕೊಳ್ಳುವ ಲೆಕ್ಕವನ್ನು ಕಡಿಮೆ ಮಾಡಲು ಈ ದಿನವು ಮಹತ್ವದ್ದಾಗಿದೆ.
• ಅಶುಭ ಅಥವಾ ಭದ್ರಾಕಾಲದಲ್ಲಿ ರಾಖಿ ಕಟ್ಟಬೇಡಿ
ಶನಿಯಂತೆಯೇ ಶನಿಯ ಸಹೋದರಿಯಾದ ಭದ್ರೆಯ ದೃಷ್ಟಿಯಿಂದ ಹಾನಿಯುಂಟಾಗುತ್ತದೆ. ಭದ್ರೆಯ ಕುದೃಷ್ಟಿಯಿಂದ ಕುಲಕ್ಕೆ ಹಾನಿಯುಂಟಾಗುವ ಸಾಧ್ಯತೆಯಿದೆ. ಆದುದರಿಂದ ಭದ್ರಾಕಾಲದಲ್ಲಿ ರಾಖಿಯನ್ನು ಕಟ್ಟಬಾರದು (ಆಧಾರ : ರ‍್ಮಸಿಂಧು). ರಾವಣನು ಭದ್ರಾಕಾಲದಲ್ಲಿ ಸರ‍್ಪನಖಿಯಿಂದ ರಾಖಿ ಕಟ್ಟಿಸಿಕೊಂಡನು, ಆದುದರಿಂದ ಅದೇ ರ‍್ಷ ಅವನ ಸಂಪೂರ್ಣ ಕುಲದ ನಾಶವಾಯಿತು ಎಂಬ ನಂಬಿಕೆಯಿದೆ.
ಆಧಾರ: ಸನಾತನದ ಗ್ರಂಥ ‘ಧಾರ್ಮಿಕ ಉತ್ಸವ ಮತ್ತು ವ್ರತಗಳ ಹಿಂದಿನ ಶಾಸ್ತ್ರ‘
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q