ತಿಪಟೂರು: ಕಲ್ಪತರು ನಾಡು ಪ್ರಮುಖ ಬೆಳೆಯಾಗಿರುವ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದ್ದು, ಬೆಂಬಲ ಬೆಲೆಯನ್ನು 12,500 ರಿಂದ 15 ಸಾವಿರಕ್ಕೆ ಏರಿಸಬೇಕು ಹೋರಾಟ ಸಮಿತಿ ಅಧ್ಯಕ್ಷ ಲೋಕೇಶ್ವರ್ ಒತ್ತಾಯಿಸಿದರು.
ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿಲು ಒತ್ತಾಯಿಸಿ ಸ್ವಯಂ ಪ್ರೇರಿತರಾಗಿ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಬಂದ್ ಆಚರಿಸಿದರು. ಈ ವೇಳೆ ಮಾತನಾಡಿದ ಲೋಕೇಶ್ವರ್, ದಿನನಿತ್ಯದ ವಸ್ತುಗಳ ಬೆಲೆ ಗಗನಕೇರಿದ್ದು ಆದರೆ ಅಡಿಕೆ ಕೊಬ್ಬರಿ ಬೆಲೆ ಮಾತ್ರ ಪಾತಾಳಕ್ಕೆ ಕುಸಿದಿರಿ ಬಿಜೆಪಿ ಸರ್ಕಾರ ಬಂದ ಮೇಲಂತೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗಿದ್ದು, ಜನಸಾಮಾನ್ಯರು ಬದುಕೋದೇ ಕಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಮುಂದಿನ ದಿನಗಳಲ್ಲಿ ರೈತರಿಗೆ ನ್ಯಾಯ ಒದಗಿಸಬೇಕು ಇಲ್ಲವಾದರೆ, ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಈ ಪ್ರತಿಭಟನೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಗಣೇಶ್ ಯಗಚಿ ಕಟ್ಟೆ, ರಾಗವ, ರೇಣುಕ, ಪ್ರಸಾದ್, ಶಶಿಭೂಷಣ್, ನಿಜಗುಣ ಹಾಗೂ ಹೋರಾಟ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz