ಹೆಚ್.ಡಿ.ಕೋಟೆ: ಕಂಠಮಟ್ಟ ಕುಡಿದು ಪುಂಡಾಟ ಮೆರೆದು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಕಿಡಿಗೇಡಿಗಳಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೆಚ್.ಡಿ.ಕೋಟೆ ಪಟ್ಟಣದ ಹ್ಯಾಂಡ್ ಪೋಸ್ಟ್ ನಲ್ಲಿ ನಡೆದಿದೆ.
ಹೊರಗಿನಿಂದ ಹ್ಯಾಂಡ್ ಪೋಸ್ಟ್ ಸರ್ಕಲ್ ಗೆ ಬಂದು ಅನವಶ್ಯಕವಾಗಿ ರಸ್ತೆಯಲ್ಲಿ ಅತೀ ವೇಗವಾಗಿ ಕಾರನ್ನು ಸರ್ಕಲ್ ನಲ್ಲಿ ಸುಖಸುಮ್ಮನ್ನೆ ಕಾರನ್ನು ಸುತ್ತಿಸಿ, ರಸ್ತೆ ಬದಿಯಲ್ಲಿ ನಿಂತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳಿಗೆ ಕೊಚ್ಚೆಯನ್ನು ಹಾರಿಸಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ.
ಎರಡೂ ಕಾರಿನಲ್ಲಿ ಬಂದು ಪುಂಡಾಟ ಆಡುತಿದ್ದ ಪಾನ ಮತ್ತರಿಗೆ ಆಕ್ರೋಶಗೊಂಡ ಸಾರ್ವಜನಿಕರು ಗೂಸ ನೀಡಿದ್ದು, ಕಾರಿನಲ್ಲಿದ್ದ ಒಬ್ಬನನ್ನು ಸಾರ್ವಜನಿಕರು ಹಿಡಿದುಪೋಲಿಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಉಳಿದವರು ಪರಾರಿಯಾಗಿದ್ದಾರೆ. ಪೊಲೀಸರು ಪರಾರಿಯಾದವರ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


