ಕೊಡಗಿನ ಎರಡು ಬೆಟ್ಟಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೊಡಗಿದ್ದಾರೆ.
ಪುಷ್ಪಗಿರಿ ಅರಣ್ಯ ವ್ಯಾಪ್ತಿಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ, ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಿಶಾನಿ ಬೆಟ್ಟದಲ್ಲಿ ಕಾಡ್ಗಿಚ್ಚು ಸಂಭವಿಸಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದು, ಒಂದು ಗಂಟೆಯಿಂದಲ್ಲೂ ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು ತೊಡಗಿದ್ದಾರೆ. ಬೆಂಕಿನಂದಿಸುವ ಕಾರ್ಯಚರಣೆಯಲ್ಲಿ ಸಾರ್ವಜನಿಕರೂ ಕೂಡ ಸಾಥ್ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


