ಬೆಳಗಾವಿ: ಇತ್ತೀಚೆಗಷ್ಟೇ ದೇಶಕ್ಕೆ ಗಂಡಾಂತರ ಕಾದಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಬೆಳಗಾವಿಯ ರಾಮತೀರ್ಥನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರುವ ದಿನಗಳಲ್ಲಿ ಒಳ್ಳೆಯ ದಿನಗಳು ಸಹ ಇವೆ. ವಿಶೇಷವಾಗಿ ಕಪ್ಪು, ಬೆಳಕಿನಲ್ಲಿ ಕಪ್ಪು ಹೆಚ್ಚಾಗಿದೆ ಎಂದರು.
ಒಗಟು ರೂಪದಲ್ಲಿ ಭವಿಷ್ಯ ನುಡಿದ ಶ್ರೀಗಳು, ರಾಷ್ಟ್ರ ರಾಜಕಾರಣದ ಬಗ್ಗೆ, ಮಹಾಭಾರತದಲ್ಲಿ ಕೃಷ್ಣ ಇದ್ದ ಎಂದು ಭೀಮ ಗೆದ್ದ. ದುರ್ಯೋಧನ ಸೋತ. ರಾಷ್ಟ್ರ ರಾಜಕಾರಣದಲ್ಲಿ ಕೃಷ್ಣ ಇಲ್ಲ. ದುರ್ಯೋಧನ ಗೆಲ್ಲುತ್ತಾನೆ. ಭೀಮ ಸೋಲುತ್ತಾನೆ. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹಾಭಾರತದಲ್ಲಿ ಅಭಿಮನ್ಯುವನ್ನು ಮೋಸದಿಂದ ಕತ್ತರಿಸುತ್ತಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಸದ್ಯಕ್ಕೆ ತೊಂದರೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ಮತದಾರರು ಮತವನ್ನು ದಾನ ಮಾಡುತ್ತಿಲ್ಲ. ಮಾರಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಈ ಹಿಂದೆ ತಾನು ರಾಜ್ಯದಲ್ಲಿ ಭೀಕರ ಮಳೆಯಾಗುತ್ತದೆ. ಗುಡ್ಡ ಕುಸಿತವಾಗುತ್ತದೆ. ಸಾವು, ನೋವು ಸಂಭವಿಸುತ್ತದೆ ಎಂದು ಹೇಳಿದ್ದೆ. ಅದು ಅಮವಾಸ್ಯೆಯವರೆಗೂ ಇರುತ್ತದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA