ವರದಿ: ಮಂಜುಸ್ವಾಮಿ ಎಂ.ಎನ್.
ತುಮಕೂರು: ಸರ್ಕಾರದ ಸುತ್ತೋಲೆಯಂತೆ ಜನವರಿ 26ನೇ ದಿನಾಂಕದಂದು ರಾಜ್ಯದ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿತ್ತು..
ಆದರೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ : 26/01/2025 ರಂದು ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ ಅವಮಾನಿಸಿ ಕಾರ್ಯಕ್ರಮ ನಡೆಸಿರುವ ಘಟನೆಯ ಬಗ್ಗೆ ನಮ್ಮ ತುಮಕೂರು ವಾಹಿನಿಯು ಸವಿವರವಾದ ವರದಿಯನ್ನು ಬಿತ್ತರಿಸಿತ್ತು.
ನಮ್ಮತುಮಕೂರು ವಾಹಿನಿಯಲ್ಲಿ ವರದಿಯಿಂದ ತಕ್ಷಣವೇ ಎಚ್ಚೆತ್ತ ತಾಲೂಕು ಆಡಳಿತದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್ ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಂಡು ಪರಿಶೀಲಿಸಿ, ಸವಿಸ್ತಾರವಾದ ವರದಿಯನ್ನು ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಜಿ. ರವರಿಗೆ ಸಲ್ಲಿಸಿದ್ದರು.
ಅನಧಿಕೃತವಾಗಿ ಗೈರು ಹಾಜರಾಗಿದ್ದ ಪಿಡಿಓ ನಾಗವೇಣಿ ಜಿ.:
ಗಣರಾಜ್ಯೋತ್ಸವದ ದಿನದಂದು ಕೊಡ್ಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ನಾಗವೇಣಿ ಜಿ. ಮೇಲಾಧಿಕಾರಿಗಳ ಅನುಮತಿ ಪಡೆಯದೇ ಅನಧಿಕೃತವಾಗಿ ಗೈರು ಹಾಜರಾಗಿ ಹಾಗೂ ಕೇಂದ್ರ ಸ್ಥಾನ ತೊರೆದಿರುವುದು ಬೆಳಕಿಗೆ ಬಂದಿರುತ್ತದೆ.
ಪಿಡಿಒ ನಾಗವೇಣಿ ಅವರ ಅನುಪಸ್ಥಿತಿಯಲ್ಲಿ ದಿನಾಂಕ : 26.01.2025 ರಂದು ಭಾನುವಾರ ಬೆಳಿಗ್ಗೆ ಸುಮಾರು 10:30ರ ಸಮಯದಲ್ಲಿ ಕೋಡಾಪುರ ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಿದ್ದನ್ನು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಿ ಕಾರ್ಯಕ್ರಮದ ಶಿಷ್ಟಾಚಾರ ಉಲ್ಲಂಘನೆಗೆ ಕಾರಣರಾಗಿರುತ್ತಾರೆ.
ಪಿಡಿಓ ಸಸ್ಪೆಂಡ್ ಮಾಡುವಂತೆ ಆಗ್ರಹಿಸಿದ್ದ : ಟೈಗರ್ ನಾಗ್
ಗಣರಾಜ್ಯೋತ್ಸವ ಕಾರ್ಯಕ್ರಮವು ದೇಶದ ಅತ್ಯಂತ ಶ್ರೇಷ್ಠವಾದ ರಾಷ್ಟ್ರೀಯ ಹಬ್ಬವಾಗಿದ್ದು ಕಾರ್ಯಕ್ರಮದ ಶಿಷ್ಟಾಚಾರ ಮತ್ತು ಸರ್ಕಾರದ ನಿರ್ದೇಶನಗಳನ್ನು ಪಾಲಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಜವಾಬ್ದಾರಿಯಾಗಿರುತ್ತದೆ. ಆದರೆ ಕೊಡ್ಲಾಪುರ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ನಾಗವೇಣಿ ಜಿ. ರವರು ಮಹತ್ವದ ರಾಷ್ಟ್ರೀಯ ಹಬ್ಬದ ದಿನದಂದು ಅನಧಿಕೃತವಾಗಿ ಗೈರು ಹಾಜರಾಗಿರುವುದಲ್ಲದೆ ಕೇಂದ್ರ ಸ್ಥಾನವನ್ನು ತೊರೆದು ರಾಷ್ಟ್ರೀಯ ಹಬ್ಬ ಆಚರಣೆ ಸಂಬಂಧ ನಿರ್ಲಕ್ಷತೆ ತೋರಿರುವುದಲ್ಲದೆ, ಸದರಿ ಕಾರ್ಯಕ್ರಮಕ್ಕೆ ಗೈರು ಹಾಜರಾದ ಸಂದರ್ಭದಲ್ಲಿ ಸದರಿ ಕಾರ್ಯಕ್ರಮದ ಆಚರಣೆಯ ಶಿಷ್ಟಾಚಾರದ ಸಂಬಂಧ ತಮ್ಮ ಅಧೀನ ನೌಕರರಿಗೆ ಸೂಕ್ತ ಮಾರ್ಗದರ್ಶನ ನೀಡದೇ ಇರುವುದರಿಂದ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ನಮ್ಮ ತುಮಕೂರು ವಾಹಿನಿಯ ಫಲಶ್ರುತಿ..
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನದ ಪಿತಾಮಹಾ, ಭಾರತ ರತ್ನ ಡಾ.ಬಿ.ಆರ್ .ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೇ ಕರ್ತವ್ಯ ನಿರ್ಲಕ್ಷ್ಯತೆ ತೋರಿರುವುದು ಹಾಗೂ ರಾಷ್ಟ್ರನಾಯಕರಿಗೆ ಅವಮಾನಿಸಿರುವ ಬಗ್ಗೆ ನಮ್ಮತುಮಕೂರು ವಾಹಿನಿ ಸವಿವರವಾದ ವರದಿಯನ್ನು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ತ್ತು ಸಾಮಾಜಿಕ ಹೋರಾಟಗಾರ ಟೈಗರ್ ನಾಗ್ ತಪ್ಪಿತಸ್ಥರನ್ನು ತಕ್ಷಣವೇ ಅಮಾನತು ಮಾಡಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದರು.
ನಮ್ಮತುಮಕೂರು ವರದಿಯಿಂದ ಎಚ್ಚೆತ್ತು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಪ್ರಭು ಜಿ., ಕೋಡಾಪುರ ಗ್ರಾ.ಪಂ, ಅಭಿವೃದ್ಧಿ ಅಧಿಕಾರಿ ನಾಗವೇಣಿ ಜಿ. ಮತ್ತು ಗ್ರೇಡ್ 2 ಕಾರ್ಯದರ್ಶಿ ವಿನೋದ್ ಕುಮಾರ್ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು–1957 ರ ವಿಯಮಾವಳಿಗಳನ್ನಯ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಿ ತಪ್ಪಿತಸ್ಥರ ಮೇಲಿರುವ ಆರೋಪಗಳ ಕುರಿತು ಇಲಾಖಾ ವಿಚಾರಣೆ ಬಾಕಿ ಇರಿಸಿ, ಪಿಡಿಒ ನಾಗವೇಣಿ ಜಿ. ಮತ್ತು ಗ್ರೇಡ್ 2 ಕಾರ್ಯದರ್ಶಿ ವಿಜಯ್ ಕುಮಾರ್ ಇಬ್ಬರನ್ನು ಸಹ ಅಮಾನತು ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4