ಹಳಿಯಾಳ: ಕೊಲ್ಲಾಪುರ ಜೈನ ಮಠದ ಸ್ವಸ್ತಿ ಶ್ರೀ ಲಕ್ಷ್ಮೀಸೇನ ಭಟ್ಟರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ಇಂದು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಹವಗಿ ಗ್ರಾಮದ ಶ್ರೀ ಪಾರ್ಶ್ವನಾಥ ಜಿನ ಮಂದಿರಕ್ಕೆ ಭೇಟಿ ನೀಡಿ ಪೂಜೆ, ಅಭಿಷೇಕ, ಆರಾಧನೆಗಳಲ್ಲಿ ಪಾಲ್ಗೊಂಡರು.
ಇದೇ ಸಂದರ್ಭದಲ್ಲಿ ಗ್ರಾಮದ ಸುಳಜಾ ಭವಾನಿ ದೇಗುಲಕ್ಕೆ ಭೇಟಿ ನೀಡಿದರು ಗ್ರಾಮದ ಪುರ ಪ್ರವೇಶದ ಸಂದರ್ಭದಲ್ಲಿ ಗ್ರಾಮದ ಜನ ಬಂದುಗಳು ಅವರಿಗೆ ಪೂರ್ಣ ಕುಂಭಗಳೊಂದಿಗೆ ಭವ್ಯ ಸ್ವಾಗತ ನೀಡಿದರು.
ಹಳಿಯಾಳ ಕ್ಷೇತ್ರ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಶ್ರೀ ಲಕ್ಷ್ಮಿ ಸೇನಾ ಭಟ್ಟರಕ ಶ್ರೀಗಳ ಆಶೀರ್ವಾದ ಪಡೆದರು. ಕಾರ್ಯಕ್ರಮದಲ್ಲಿ ಜೈನ ಬಂಧುಗಳು ಶ್ರಾವಕ -ಶ್ರಾವಕಿಯರು ಭಾಗವಹಿಸಿದ್ದರು.
ವರದಿ: ಜೆ.ರಂಗನಾಥ, ತುಮಕೂರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx